ಮಡಿಕೇರಿ, ಸೆ. ೧೮: ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ತಾ.೨೪ ರಂದು ಬುಧವಾರ ಕಾಫಿ ದಸರಾ ಸಂಭ್ರಮ ಮೇಳೈಸಲಿದ್ದು, ಕಾಫಿ ಕೃಷಿಕರಿಗೆ ಸನ್ಮಾನ ಮತ್ತು ಕಾಫಿ ಕೃಷಿ ಸಂಬAಧಿತ ಮಾಹಿತಿ ದೊರಕಲಿದೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವರ್ಷದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾಕ್ಕೆ ಉತ್ತಮ ಸ್ಪಂದನ ದೊರಕಿದ್ದ ಹಿನ್ನಲೆಯಲ್ಲಿ ಈ ವರ್ಷವೂ ಕಾಫಿ ದಸರಾ ಆಯೋಜಿಸಲಾಗಿದೆ. ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿತ ಎರಡನೇ ವರ್ಷದ ಕಾಫಿ ದಸರಾವನ್ನು ತಾ.೨೪ ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ಕೊಡಗಿನ ದಿ. ಸಾಕಮ್ಮ ಸ್ಮರಣಾರ್ಥ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜ್ ಅವರು ಕಾಫಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ವೇದಿಕೆಯ ಕಾರ್ಯಕ್ರಮಗಳನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೃಂದ ಉದ್ಘಾಟಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಕನ್, ವಿಧಾನಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಬೋಜೇಗೌಡ, ಡಾ.ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ವೆಂಕಟರಾಜಾ, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ. ರಾಜೇಶ್, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ನಂದಾ ಬೆಳ್ಯಪ್ಪ, ಮಹಿಳಾ ಕಾಫಿ ಜಾಗೃತಿ ಸಂಘದ ಅಧ್ಯಕ್ಷೆ ಜ್ಯುತಿಕಾ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.

ಕಾಫಿ ಸಂಬAಧಿತ ಮಾಹಿತಿ

ಕಾಫಿ ದಸರಾ ಅಂಗವಾಗಿ ಕಾಫಿ ಕೃಷಿಕರಿಗ ಸಾಕಷ್ಟು ಮಾಹಿತಿ ನೀಡುವ ಉಪನ್ಯಾಸ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಏರ್ಪಡಿಸಲಾಗಿದೆ. ಭಾರತೀಯ ಕಾಫಿ ಮಂಡಳಿಯ ಗುಣಮಟ್ಟ ವಿಭಾಗದ ನಿರ್ದೇಶಕ ಡಾ. ಐಚೆಟ್ಟೀರ ಮಂದಪ್ಪ ಕಾಫಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಿಕೆ ವಿಚಾರ ಸಂಬAಧಿತ ಮಾತನಾಡಲಿದ್ದು, ಸಕಲೇಶಪುರದ ಪ್ರಗತಿಪರ ಕೃಷಿಕ ಕರಣ್ ಅವರು ಕಾಫಿ ಕೃಷಿಯಲ್ಲಿ ಇತ್ತೀಚಿನ ಹೊಸ ತಳಿಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕುಶಾಲನಗರದ ಪ್ರಗತಿ ಪರ ಕೃಷಿಕ ಜೆರ್ಮಿ ಡಿಸೋಜಾ ಅವರು ರೋಬಸ್ಟಾ ಕಾಫಿಯಲ್ಲಿ ಕುಬ್ಜ ತಳಿಯ ಬಗ್ಗೆ, ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಚೇಂದ್ರಿಮಾಡ ಕ್ಯಾಪ್ಟನ್ ತಿಮ್ಮಯ್ಯ ಅವರು ಕಾಫಿ ಕೃಷಿಗೆ ಪೂರಕವಾದ ಮಣ್ಣಿನ ಫಲವತ್ತತೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಕಾಫಿ ಸಾಧಕರಿಗೆ ಸನ್ಮಾನ

ಕಾಫಿ ದಸರಾ ಅಂಗವಾಗಿ ಜಿಲ್ಲೆಯ ೧೦ ಸಾಧಕ ಕೃಷಿಕರಿಗೆ ಮಧ್ಯಾಹ್ನ ೧ ಗಂಟೆಗೆ ಸನ್ಮಾನದ ಗೌರವ ನೆರವೇರಲಿದೆ. ಸುಂಟಿಕೊಪ್ಪ ಬಳಿಯ ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ, ಕಿರಗಂದೂರು ಗ್ರಾಮದ ಹಿರಿಯ ಕೃಷಿಕರಾದ ಎಸ್.ಎಂ.ಚAಗಪ್ಪ, ಪ್ರಗತಿಪರ ಬೆಳೆಗಾರ ಲವ ಎಡದಂಟೆ, ಪೊನ್ನಂಪೇಟೆ ಹುದೂರು ಗ್ರಾಮದ ಸಾಧಕ ಕೃಷಿಕ ಬಿ.ಪಿ. ರವಿಶಂಕರ್, ಕೊಡ್ಲಿಪೇಟೆಯ ಕಾಫಿ ನರ್ಸರಿ ಮಾಲೀಕ ಡಿ.ವೈ. ರಜಾಕ್, ಹಿರಿಯ ಕಾಫಿ ಉದ್ಯಮಿ ಮಡಿಕೇರಿಯ ನಿಜಾಮುದ್ದೀನ್ ಸಿದ್ದಿಕಿ, ತಾಕೇರಿಯ ಸಿರಿ ಸ್ವಸಹಾಯ ಮಹಿಳಾ ಸಂಘ, ಕುಂದಗ್ರಾಮದ ಪ್ರಗತಿ ಪರ ಕೃಷಿಕ ಕೊಡಂದೇರ ನರೇನ್ ಕುಟ್ಟಯ್ಯ,, ಚೆಟ್ಟಳ್ಳಿ ಪೊನ್ನತ್ತಮೊಟ್ಟೆಯ ಮಿಶ್ರಬೆಳೆ ಕೃಷಿಕ ರಾಬರ್ಟ್, ಶ್ರೀ ವಿಕ್ರಂ, ಪ್ರಗತಿ ಪರ ಕೃಷಿಕರು, ಮಸಗೋಡು. ಅವರನ್ನು ಸನ್ಮಾನಿಸಲಾಗುತ್ತದೆ.

ಕಾಫಿ ಖಾದ್ಯ ಸ್ಪರ್ಧೆಗಳು

ಕಾಫಿ ದಸರಾ ಅಂಗವಾಗಿ ಕಾಫಿಯಿಂದ ತಯಾರಿಸಲಾದ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್, ವಿಭಾಗ, ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ, ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ, ಕಾಫಿ ಫ್ಲೆವರ್ ಪುಡ್ಡಿಂಗ್ ವಿಭಾಗ, ವಿಭಿನ್ನ ರುಚಿಯಿರುವ ಕಾಫಿ ಪಾನೀಯ ವಿಭಾಗ, ಕಾಫಿ ಫ್ಲೇವರ್ ಚಾಕಲೇಟ್ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿತವಾಗಿದೆ.

ಮಳಿಗೆಗಳು

ಕಾಫಿ ದಸರಾ ಅಂಗವಾಗಿ ಈ ವರ್ಷವೂ ೩೫ ಮಳಿಗೆಗಳು ಕಾಫಿ ಸಂಬAಧಿತ ಮಾಹಿತಿಯನ್ನು ನೀಡಲಿವೆ. ಕೊಡಗಿನ ಅನೇಕ ಕಾಫಿ ಕೆಫೆಗಳಲ್ಲಿ ಸ್ವಾದಿಷ್ಟ ಕಾಫಿ ಸವಿಯನ್ನೂ ಸವಿಯಬಹುದಾಗಿದೆ. ಭಾರತೀಯ ಕಾಫಿ ಮಂಡಳಿ, ಕೃಷಿ ಇಲಾಖೆ, ಪಶುವೈದ್ಯಕೀಯ ಇಲಾಖೆ, ತೋಟಗಾರಿಕಾ ಇಲಾಖೆ, ಕೈಗಾರಿಕಾ ಇಲಾಖೆ, ಹಾಪ್ ಕಾಮ್ಸ್, ನಂದಿನಿ ಹಾಲಿನ ಉತ್ಪನ್ನಗಳು, ಮೀನುಗಾರಿಕಾ ಇಲಾಖೆ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಸೇರಿದಂತೆ ಕಾಫಿ ಸಂಬAಧಿತ ಅನೇಕ ಸಂಘ ಸಂಸ್ಥೆಗಳು, ಕಾಫಿ ಕೆಫೆಗಳು ಈ ವರ್ಷದ ಕಾಫಿ ದಸರಾದಲ್ಲಿ ಮಾಹಿತಿ ನೀಡಲಿವೆ ಎಂದು ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.

ಕಾಫಿ ದಸರಾ ಸಮಿತಿ

ಶಾಸಕ ಡಾ.ಮಂತರ್ ಗೌಡ ಮಾರ್ಗದರ್ಶನದಲ್ಲಿನ ಕಾಫಿ ದಸರಾ ಸಮಿತಿಯಲ್ಲಿ ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ನಂದಾ ಬೆಳ್ಯಪ್ಪ, ನಿರ್ದೇಶಕ ಕೆ.ಕೆ. ವಿಶ್ವನಾಥ್, ಮೂಡಾ ಅಧ್ಯಕ್ಷ ಬಿ.ವೈ. ರಾಜೇಶ್, ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಸಲಹೆಗಾರರಾಗಿದ್ದಾರೆ. ಕಾಫಿ ದಸರಾ ಸಮಿತಿ ಸದಸ್ಯರಾಗಿ ವಿನೋದ್ ಮೂಡಗದ್ದೆ, ಮೇಪಾಡಂಡ ಸವಿತಾ ಕೀರ್ತನ್, ಪುದಿನೆರವನ ರೇವತಿ, ವೀಣಾಕ್ಷಿ, ಪಾಲೆಯಂಡ ರೂಪಾ ಸುಬ್ಬಯ್ಯ, ಮಿನಾಜ್ ಪ್ರವೀಣ್, ಮೂವೇರ ಸರಿತ ಹರೀಶ್, ಶಿವಪ್ಪ, ಸುನೀಲ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಅನಿಲ್ ತಿಳಿಸಿದ್ದಾರೆ. ಕಾಫಿ ದಸರಾ ಬೆಳಿಗ್ಗೆ ೧೦ ಗಂಟೆಯಿAದ ರಾತ್ರಿ ೧೦ ಗಂಟೆಯವರೆಗೆ ನಡೆಯಲಿದೆ.