ಮಡಿಕೇರಿ, ಸೆ. ೧೮: ನಾಪೋಕ್ಲು ಶ್ರೀರಾಮ ಟ್ರಸ್ಟ್ ವಿದ್ಯಾರ್ಥಿಗಳು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಡೆದ ವಿವಿಧ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾರೆ. ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಹಿರಿಯ ಪ್ರಾಥಮಿಕ ಹಂತದ ಬಾಲಕ, ಬಾಲಕಿಯರು ಹಾಗೂ ಪ್ರೌಢ ಶಾಲಾ ಬಾಲಕಿಯರು ವಾಲಿಬಾಲ್ನಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಮೇಲಾಟದಲ್ಲಿ ಪ್ರೌಢ ಶಾಲಾ ಬಾಲಕ, ಬಾಲಕಿಯರು ಓಟದ ಸ್ಪರ್ಧೆ, ಭಾರದ ಗುಂಡು ಎಸೆತ, ಭರ್ಜಿ ಎಸೆತ, ತಟ್ಟೆ ಎಸೆತದಲ್ಲಿ ಮುಂದಿನ ಹಂತದಲ್ಲಿ ಭಾಗವಹಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಬಾಲಕರ ಹಾಕಿ, ಬಾಲ್ಬ್ಯಾಂಡ್ ಮಿಂಟನ್, ಟೇಬಲ್ ಟೆನ್ನಿಸ್ನಲ್ಲಿ ವಿಜೇತರಾಗಿ ಮುಂದಿನ ಹಂತದಲ್ಲಿ ಭಾಗವಹಿಸಿದ್ದಾರೆ.
ಪ್ರೌಢಶಾಲಾ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್ನಲ್ಲಿ ವಿಜೇತರಾಗಿದ್ದಾರೆ. ಪ್ರಾಥಮಿಕ ಶಾಲಾ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್ನಲ್ಲಿ ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಬಾಲಕಿಯರು ಹಾಗೂ ಬಾಲಕರು ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ನಲ್ಲಿ ದ್ವಿತೀಯ ಸ್ಥಾನವನ್ನು ತಾಲೂಕು ಮಟ್ಟದಲ್ಲಿ ಪಡೆದಿರುತ್ತಾರೆ. ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರು ಹಾಕಿ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್ನಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ.
ಪ್ರಾಂಶುಪಾಲರಾದ ಶಾರದ ಬಿ.ಎಂ. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಶಾಲೆಯ ದೈಹಿಕ ಶಿಕ್ಷಕಿ ಸರಿತ ಕೆ.ಕೆ. ನೀಡಿದ್ದಾರೆ. ವ್ಯವಸ್ಥಾಪಕರಾಗಿ ಕಾಳಯ್ಯ ಎಂ.ಡಿ. ಕರ್ತವ್ಯ ನಿರ್ವಹಿಸಿದ್ದರು.