ಸಿದ್ದಾಪುರ, ಸೆ. ೧೯: ನೆಲ್ಲಿಹುದಿಕೇರಿ ಗ್ರಾಮದ ಬರಡಿಯ ಶ್ರೀ ವಿಘ್ನೇಶ್ವರ ಮಿತ್ರ ಮಂಡಳಿ ವತಿಯಿಂದ ೨೯ನೇ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ ವಿಜೃಂಭಣೆಯಿAದ ನಡೆಯಿತು.

ವಿಸರ್ಜನೋತ್ಸವ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಿತು. ಬಳಿಕ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ನಡೆಸಲಾಯಿತು.

ಬಳಿಕ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ವಿಸರ್ಜನೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಶ್ರೀ ವಿಘ್ನೇಶ್ವರ ಮಿತ್ರ ಮಂಡಳಿಯ ಅಧ್ಯಕ್ಷ ಅನಿಲ್ ಕುಮಾರ್ ಹಾಗೂ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.