ವೀರಾಜಪೇಟೆ, ಸೆ. ೧೯: ಸದ್ಭಾವನಾ ಮಂಚ್ ವೀರಾಜಪೇಟೆ ಆಶ್ರಯದಲ್ಲಿ ತಾ. ೨೦ರಂದು (ಇಂದು) ಸೌಹಾರ್ದ ಸಂಗಮ ಕಾರ್ಯಕ್ರಮ ನಡೆಯಲಿದೆ. ಅರಮೇರಿ ಶ್ರೀ ಕಳಂಚೇರಿ ಮಠದ ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸದ್ಭಾವನಾ ಮಂಚ್ ಸ್ಥಾನೀಯ ಅಧ್ಯಕ್ಷ ಡಾ|| ಎಂ.ಸಿ. ಕಾರ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಜಮಾಅತ್ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ ಸೌಹಾರ್ದ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಪ್ರೊ. ಪಟ್ಟಡ ಎ. ಪೂವಣ್ಣ, ಸಂತ ಅನ್ನಮ್ಮ ದೇವಾಲಯದ ಧರ್ಮಗುರುಗಳಾದ ರೆ.ಫಾ. ಜೇಮ್ಸ್ ಡೊಮಿನಿಕ್, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ|| ಮೇಚಿರ ಸುಭಾಷ್ ನಾಣಯ್ಯ, ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳ ಮುಖ್ಯ ವ್ಯವಸ್ಥಾಪಕ ರೆ||ಫಾ|| ಮದುಲೈ ಮುತ್ತು, ವೀರಾಜಪೇಟೆ ಪುರಸಭಾ ಅಧ್ಯಕ್ಷೆ ಎಂ.ಕೆ. ದೇಚಮ್ಮ ಕಾಳಪ್ಪ, ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಹಾಗೂ ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ ರವಿ ಉತ್ತಪ್ಪ ಪಾಲ್ಗೊಳ್ಳಲಿದ್ದಾರೆ.