ಮುಳ್ಳೂರು, ಸೆ. ೧೯: ಸಮೀಪದ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು, ರಾಷ್ಟಿçÃಯ ಸೇವಾ ಯೋಜನೆ ಘಟಕ ಹಾಗೂ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸೋಮವಾರಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಕುರಿತು ಕೊಡ್ಲಿಪೇಟೆ ಸಮುದಾಯ ಆರೋಗ್ಯ ಅಧಿಕಾರಿ ಅನಿತಾ ಮಾತನಾಡಿ, ಸರಕಾರ ಮತ್ತು ಆರೋಗ್ಯ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದ್ದು ಈ ಮೂಲಕವಾಗಿ ಜನರಿಗೆ ಸೇವೆ ನೀಡುತ್ತಿದೆ. ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಜನರಿಗೆ ಪರಿಚಯಿಸುವ ಉದ್ದೇಶದಿಂದ ಸರಕಾರ ಮತ್ತು ಆರೋಗ್ಯ ಇಲಾಖೆಯು ವಿದ್ಯಾರ್ಥಿಗಳಿಗೆ ರಸಪ್ರಶ್ನೆಯಂತಹ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಮೂಲಕ ಜನರಿಗೆ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ಸಹಕಾರಿಯಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಪಿ. ಮಹೇಶ್, ಸಮುದಾಯ ಆರೋಗ್ಯ ಅಧಿಕಾರಿಗಳಾದ ದರಣೀಶ್ ರಾಜ್, ದುಂಬಿತ ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಯೋಗೇಂದ್ರ, ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.