ಕಡಂಗ, ಸೆ. ೧೯ : ಜಾಲತಾಣದಲ್ಲಿ ಕಾರ್ಮಿಕರ ಸಚಿವ ಸಂತೋಷ್ ಲಾಡ್ ವಿರುದ್ಧ ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಅಖಿಲ್ ನಾಚಪ್ಪ ಎಂಬ ಹೆಸರಿನ ಖಾತೆಯಿಂದ ಕಾರ್ಮಿಕ ಸಚಿವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇವರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ನೇತೃತ್ವದಲ್ಲಿ ದೂರು ನೀಡಲಾಯಿತು. ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಕೀಮ್, ಜಿಲ್ಲಾ ಉಪಾದ್ಯಕ್ಷ ರಾಹುಲ್ ಮಾರ್ಷಲ್, ವೀರಾಜಪೇಟೆ ವಿಧಾನಸಭಾ ಅಧ್ಯಕ್ಷ ರಕ್ಷಿತ್ ಚಂಗಪ್ಪ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕವನ್ ಕೊಥೋಲಿ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಹಂಸ ಕೋಡಿ, ಜಿಲ್ಲಾ ಉಪಾಧ್ಯಕ್ಷ ಕೊಣಿಯಂಡ ಮುತ್ತಣ್ಣ, ಅನ್ಫಾಲ್, ಅರ್ಜುನ್, ರಶೀದ್ ಮತ್ತಿತರರು ಹಾಜರಿದ್ದರು.