ಕಣಿವೆ, ಸೆ. ೧೯: ಪೌಷ್ಟಿಕ ಆಹಾರಗಳನ್ನು ಹೆಚ್ಚು ಹೆಚ್ಚಾಗಿ ಸೇವಿಸುವ ಮೂಲಕ ತಾಯಿ ಹಾಗೂ ಮಗು ಆರೋಗ್ಯ ವೃದ್ದಿಯಾದರೆ ಅದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಡಿಗಲ್ಲು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ. ಷÀಂಶುದ್ದೀನ್ ಅವರು ಹೇಳಿದರು.
ಸುಂದರನಗರ ಅಂಗನವಾಡಿಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟಿçÃಯ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಮಕ್ಕಳ ಆರೋಗ್ಯ ದೃಷ್ಟಿಯಿಂದ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶಭರಿತ ಆಹಾರಗಳನ್ನು ಸೇವಿಸಬೇಕು. ಸೊಪ್ಪು ತರಕಾರಿಗಳನ್ನು ಸೇವಿಸಬೇಕು. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಬಹುದಾಗಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಸತ್ವಭರಿತ, ಪೌಷ್ಟಕ ಆಹಾರಗಳನ್ನು ನೀಡಲಾಗುತ್ತದೆ. ಅದರಂತೆ ಮನೆಯಲ್ಲಿಯೂ ತಾಯಂದಿರು ಇದನ್ನು ಮುಂದುವರೆಸಬೇಕು. ಮಕ್ಕಳ ಆರೋಗ್ಯವನ್ನು ಹದಗೆಡಿಸುವಂತಹ ಆಹಾರಗಳನ್ನು ನೀಡಬಾರದು. ಇದು ಮಕ್ಕಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದರು.
ಹಾರಂಗಿ ಬಿ ವ್ಯಾಪ್ತಿಯ ಸಮುದಾಯ ಆರೋಗ್ಯಾಧಿಕಾರಿ ಸೌಮ್ಯ ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ತಾಯಂದಿರು ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಮಾತ್ರ ಸೇವಿಸಬೇಕು ಎಂದ ಅವರು, ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿಗಳ ಬಗ್ಗೆ ಸವಿವರವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಮಾಡಿ,ಫಲ ತಾಂಬೂಲ ನೀಡಲಾಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸುಮಿತ್ರ, ಸ್ಥಳೀಯರಾದ ಸುರಕ್ಷಾ, ಸ್ವಪ್ನ, ಶಿವರಂಜಿನಿ, ಅಕ್ಷತಾ, ವಿಲ್ಮಾ, ಭುವನ ಹಾಗೂ ಇನ್ನಿತರರು ಭಾಗವಹಿಸಿದ್ದರು.