ಸಿದ್ದಾಪುರ, ಸೆ. ೨೦: ಇತ್ತೀಚೆಗೆ ಸಿದ್ದಾಪುರದಲ್ಲಿ ಎಸ್.ಎನ್.ಡಿ.ಪಿ. ಜಿಲ್ಲಾ ಯೂನಿಯನ್ ವತಿಯಿಂದ ನಡೆದ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಹಾಗೂ ಸಮಾಜ ಸೇವೆಯಲ್ಲಿ ತೊಡಗಿದ ಸಿದ್ದಾಪುರದ ಕರಡಿಗೋಡು ಆರೆಂಜ್ ಕೌಂಟಿ ರೆಸಾರ್ಟ್ನ ಅಧ್ಯಕ್ಷ ಇಮ್ಯಾನುವಲ್ ಟಿ. ರಾಮಪುರಂ ಅವರನ್ನು ಜಿಲ್ಲಾ ಎಸ್.ಎನ್.ಡಿ.ಪಿ. ಯೂನಿಯನ್ ವತಿಯಿಂದ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಎನ್.ಡಿ.ಪಿ. ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್ ಹಾಗೂ ಪದಾಧಿಕಾರಿಗಳು ಅತಿಥಿಗಳು ಹಾಜರಿದ್ದರು.