ಮಡಿಕೇರಿ, ಸೆ. ೨೧: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ (ಇಂದಿನಿAದ) ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಶನಿವಾರ ನಡೆಯಿತು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಿದ್ಧತೆ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರ ನಿಯೋಜನೆ, ಕಿಟ್ ವಿತರಣೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ೧೧೩೨ ಸಮೀಕ್ಷಾದಾರರು ಮತ್ತು ೭೧ ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಮೀಕ್ಷಾದಾರರ ಮ್ಯಾಪಿಂಗ್ ಕಾರ್ಯವು ಶೇ.೯೦ ರಷ್ಟು ಪೂರ್ಣಗೊಂಡಿದೆ. ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.
ಈಗಾಗಲೇ ಪ್ರತೀ ಕುಟುಂಬಗಳಿಗೂ ಸ್ಟಿಕ್ಕರ್ಗಳನ್ನು ಅಂಟಿಸಲಾಗಿದೆ. ಆ ನಿಟ್ಟಿನಲ್ಲಿ ಪ್ರತೀ ಕುಟುಂಬದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.
ಈ ಸಂದರ್ಭ ಮಾತನಾಡಿದ ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ಕೃಷ್ಣಮೂರ್ತಿ ಅವರು ಎರಡನೇ ಹಂತದ ತರಬೇತಿ ನಡೆದಿದೆ ಎಂದು ತಿಳಿಸಿದರು.
ಸಮೀಕ್ಷೆದಾರರ ನಿಯೋಜನೆ ಮತ್ತಿತರ ಸಂಬAಧ ವೀರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜ ಅವರು ೪ಏಳನೇ ಪು ಸಮೀಕ್ಷೆ ಸಂಬAಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾಯ ತಾಲೂಕು ಮಟ್ಟದಲ್ಲಿ ಸಮೀಕ್ಷೆದಾರರನ್ನು ನಿಯೋಜಿಸಿದ್ದಾರೆ ಎಂದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಕಂದಾಯ, ಶಾಲಾ ಶಿಕ್ಷಣ, ಸೆಸ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಶಾಲಾ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮೀಕ್ಷೆ ಯಶಸ್ಸುಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬAಧ ಸೆಪ್ಟೆಂಬರ್ ೨೨ ರಿಂದ ಪ್ರತೀ ದಿನ ಸಂಜೆ ವೀಡಿಯೊ ಸಂವಾದ ಮೂಲಕ ಮಾಹಿತಿ ಪಡೆಯಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದ್ದು, ತಮ್ಮ ತಮ್ಮ ಹಂತದಲ್ಲಿ ಯಾರೂ ಬಿಟ್ಟು ಹೋಗದಂತೆ ಸಮೀಕ್ಷೆ ನಡೆಸುವಂತೆ ತಿಳಿಸಿದರು. ಇನ್ನಷ್ಟು ಮಾಹಿತಿ: ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮರ್ಪಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ.