ಕುಶಾಲನಗರ, ಅ. ೧: ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಿರಿಬಳಗದ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಸಾಹಿತ್ಯಾಭಿಮಾನಿಗಳು ಕಂಬನಿ ಮಿಡಿದರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಕಾದಂಬರಿಕಾರ ಭೈರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಒಂದು ನಿಮಿಷ ಕಾಲ ಮೌನಾಚರಣೆ ನಡೆಸಿ ನುಡಿನಮನ ಸಲ್ಲಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ತಮ್ಮ ಕಾದಂಬರಿ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಎಸ್.ಎಲ್. ಭೈರಪ್ಪ ಅವರ ಕೃತಿಗಳು ಹಲವಾರು ಭಾಷೆಗಳಿಗೆ ಅನುವಾದವಾಗಿರುವುದು ಅವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿ
ದೆ ಎಂದರು.
ಜಿಲ್ಲಾ ಕಸಾಪ ಸಮಿತಿಯ ಸದಸ್ಯ ಎಂ.ಎನ್. ವೆಂಕಟನಾಯಕ್ ಮಾತನಾಡಿ, ವಂಶವೃಕ್ಷ, ದಾಟು, ತಂತು ಮುಂತಾದ ಪ್ರಮುಖ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ನಾಡಿನ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನವು ಕನ್ನಡದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದರು.
ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಡಿ. ರಂಗಸ್ವಾಮಿ ಮಾತನಾಡಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರೂ ಆದ ಎಸ್.ಎಲ್. ಭೈರಪ್ಪ ಅವರ ಅಗಲುವಿಕೆ ವಿಷಾದದ ಸಂಗತಿ ಎಂದರು.
ಎಸ್.ಎಲ್. ಭೈರಪ್ಪ ಅವರ ಸಾಹಿತ್ಯ ಯಾತ್ರೆ ಕುರಿತು ಮಾತನಾಡಿದ ಲೇಖಕರಾದ ಉ.ರಾ. ನಾಗೇಶ್, ಭೈರಪ್ಪ ಅವರು ಉಪನಿಷತ್ತಿನ ರೀತಿಯಲ್ಲಿ ಸಾಹಿತ್ಯ ಲೋಕದ ಶಿಖರದೆತ್ತರದಲ್ಲಿ ನಿಂತ ಮಹಾನ್ ಲೇಖಕರು. ಅವರ ಸಾಹಿತ್ಯವು ಕನ್ನಡ ಸಾರಸ್ವತ ಲೋಕದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು.
ಸಾಹಿತ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅಪಾರ ಸಾಧನೆಯು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕಿರೀಟಪ್ರಾಯವಾಗಿದೆ ಎಂದರು. ಕೂಡಿಗೆ ಸರ್ಕಾರಿ ಪಿ.ಯು. ಕಾಲೇಜಿನ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್, ನಿವೃತ್ತ ಪ್ರಾಂಶುಪಾಲ ಜಿ. ಕೆಂಚಪ್ಪ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ತಾಲೂಕು ಕಸಾಪ ಗೌರವ ಕೋಶಾಧಿಕಾರಿ ಕೆ.ವಿ. ಉಮೇಶ್, ಕಸಾಪ ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಅಣ್ಣಯ್ಯ ಮತ್ತಿತರರು ಇದ್ದರು.