ಮಡಿಕೇರಿ, ಸೆ. ೩೦: ಬಾಕಿ ಇರುವ ಮಡಿಕೇರಿ-ಪಾಣತ್ತೂರು (ಕೇರಳ ಗಡಿ) ರಸ್ತೆ ಕಾಮಗಾರಿಯ ಕುರಿತು ತಾನು ಸಲ್ಲಿಸಲಾದ ಮನವಿಗೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರು ಪ್ರತಿಕ್ರಿಯಿಸಿದ್ದು, ಆ ಪ್ರಸ್ತಾವನೆಯೂ ಸಚಿವರ ನಿರ್ದೇಶನದ ಮೇರೆಗೆ ಪರಿಶೀಲನೆಯಲ್ಲಿದೆ. ಅಲ್ಲದೆ ಪೆರಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬಿ.ಎಸ್.ಎನ್.ಎಲ್ ಟವರ್ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು ಇನ್ನೂ ಕೇವಲ ಸೋಲಾರ್ ಪ್ಯಾನೆಲ್ ಅಳವಡಿಕೆ ಮತ್ತು ತಾಂತ್ರಿಕ ಪ್ರಕ್ರಿಯೆಗಳು ಬಾಕಿ ಇರುವುದಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಶೀಘ್ರದಲ್ಲೇ ಇದು ಪೂರ್ಣಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಂಪರ್ಕ ಜಾಲವನ್ನು ಒದಗಿಸಲಾಗುತ್ತದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.