ನಾಪೋಕ್ಲು, ಅ. ೧: ಮೂರ್ನಾಡು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ “ಸೇವಾಪಾಕ್ಷಿಕ” ಕಾರ್ಯಕ್ರಮ ಆಯೋಜಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭ ರಕ್ತದಾನ ಶಿಬಿರ, ಜನ ಸಂಘದ ಸ್ಥಾಪಕರಾದ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನದ ಆಚರಣೆ ಮತ್ತು ಮೂರ್ನಾಡು ಆಸ್ಪತ್ರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನೆರವೇರಿಸಲಾಯಿತು.
ಮೂರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ರವಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಸಭಾ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶ್ವಿ ಸತೀಶ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ, ಮಹಿಳಾ ಮೋರ್ಚಾ ಅಧ್ಯಕ್ಷ ಕುಮುದ ಮತ್ತು ಬಿಜೆಪಿ ಕಾರ್ಯಕರ್ತರು ಶಕ್ತಿ ಕೇಂದ್ರದ ಪ್ರಮುಖ್, ಸಹ ಪ್ರಮುಖ್ ಮತ್ತು ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿ, ವಂದಿಸಿದರು.