ಮುಳ್ಳೂರು, ಅ. ೧: ಸಮೀಪದ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನೆಯ ದಿನಾಚರಣೆ ಆಚರಿಸಲಾಯಿತು ಮತ್ತು ಈ ಸಂದರ್ಭದಲ್ಲಿ ೨೦೨೫-೨೬ನೇ ಸಾಲಿನ ಯೋಜನೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಲಾಯಿತು.
ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಂ.ಎನ್.ಹರೀಶ್ ದಿನದ ಮಹತ್ವ ಕುರಿತು ಮಾತನಾಡಿ-ರಾಷ್ಟಿçÃಯ ಸೇವಾ ಯೋಜನೆಯ ಘಟಕದಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನಾಯಕತ್ವದ ಬೆಳವಣಿಗೆಗೆ ಪೂರಕ ವೇದಿಕೆಯಾಗುತ್ತದೆ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕದಲ್ಲಿ ಪಾಲ್ಗೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವುದರ ಜೊತೆಯಲ್ಲಿ ಯೋಜನೆ ಮೂಲಕ ಕಲಿತಿರುವುದನ್ನು ಜೀವನದ ಉದ್ದಕ್ಕೂ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ವಿ.ಶಂಭುಲಿAಗಪ್ಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್, ಕಾಲೇಜು ಪ್ರಾಂಶುಪಾಲ ಎಂ.ಎನ್. ನಿರಂಜನ್, ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ ಕಾಲೇಜಿನ ಉಪನ್ಯಾಸಕರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.