ಸುAಟಿಕೊಪ್ಪ, ಅ. ೧: ಮಾಲಯಾಳಿ ಸಮಾಜದ ಆಚಾರ ವಿಚಾರ ಸಂಸ್ಕೃತಿ ಪರಂಪರೆಯೂ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಮಲಯಾಳಿ ಸಮಾಜದಿಂದ ೧೮ನೇ ವರ್ಷದ ಓಣಂ ಆಚರಣೆ ಪ್ರಯುಕ್ತ ಶ್ರೀ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಸಮಾಜದವರು ತಮ್ಮ ತಮ್ಮ ಸಮಾಜದ ಸಂಘಟನೆಗಾಗಿ ಆಚಾರ ವಿಚಾರ ಸಂಸ್ಕೃತಿಗಳನ್ನು ಬೆಳೆಸುತ್ತಿದ್ದು, ಇದರಿಂದ ದೇಶದ ಅಭಿವೃದ್ಧಿಗೆ ಪೂರಕವಾಗುತ್ತಿದ್ದು ಪ್ರತಿ ಸಮಾಜದ ಬೆಳವಣಿಗೆಗೆ ಬಾಂಧÀವ್ಯ ವೃದ್ಧಿಗೆ ಸಹಕಾರಿಯಾಗುತ್ತಿದೆ ಇದೇ ರೀತಿಯ ಒಗ್ಗಟ್ಟನ್ನು ಮುಂದಿನ ಪೀಳಿಗೆಗೂ ಮುಂದುವರೆಸಿಕೊAಡು ಹೋಗಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಮಾತನಾಡಿ, ಹಿಂದೂ ಮಲಯಾಳಿ ಸಮಾಜ ಸಂಘಟನಾತ್ಮಕವಾಗಿ ಬಲಾಢ್ಯವಾಗಿದೆ. ಸಮಾಜದ ಒಗ್ಗಟ್ಟಿಗೆ ಬೆಳವಣಿಗೆಗೆ ಪ್ರತಿಯೊಬ್ಬ ಮಲಯಾಳಿ ಬಾಂಧÀವರು ಕೈಜೋಡಿಸಬೇಕು. ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಸಮಾಜದಿಂದ ಆಗುವ ಸಹಾಯ ಮಾಡಬೇಕೆಂದರು.

ಕೊಡಗು ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್ ಕುಮಾರ್ ಮಾತನಾಡಿ, ಸಮಾಜದ ಒಗ್ಗಟ್ಟಿಗೆ, ದೇಶದ ಅಭಿವೃದ್ಧಿಗೆ, ಕಲೆ ಸಂಸ್ಕೃತಿಗೆ ಮಲಯಾಳಿ ಸಮಾಜದ ಕೊಡುಗೆ ಅಪಾರವಾಗಿದೆ. ಕೇರಳದ ಮಾವೆಲಿ ತಾಂಬೂರನ್ ಓಣಂ ಆಚರಣೆಯ ಶುಭಾಶಯ ಕೋರಿದರು. ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಮಲಯಾಳಿಗರು ಎಲ್ಲಾ ಕ್ಷೇತ್ರಗಳಲ್ಲೂ ಚಾಪನ್ನು ಮೂಡಿಸಿದ್ದಾರೆ ಇದಕ್ಕೆ ಮಾಲಯಾಳಿ ಸಮಾಜದವರ ಸಂಘಟನೆಯೇ ಕಾರಣವಾಗಿದೆ. ಮುಂದಿನ ದಿನಗಳಲ್ಲಿಯೂ ಸಮಾಜ ಬಾಂಧವರು ಸಂಸ್ಕೃತಿ ಆಚಾರ ವಿಚಾರವನ್ನು ಬೆಳೆಸಬೇಕೆಂದು ಕರೆ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್ ಮಾತನಾಡಿ, ಮಲಯಾಳಿ ಸಮುದಾಯ ಭವನ ನಿರ್ಮಿಸಲು ೧ ಲಕ್ಷ ರೂ ದೇಣಿಗೆ ಹಾಗೂ ಸಮಾರಂಭಕ್ಕೆ ಧನ ಸಹಾಯ ನೀಡುವುದಾಗಿ ಘೋಷಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಲಯಾಳಿ ಸಮಾಜದ ಅಧ್ಯಕ್ಷ ರಮೇಶ್‌ಪಿಳ್ಳೆ ವಹಿಸಿ ಮಾತನಾಡಿದರು. ಸಮಾರಂಭದ ವೇದಿಕೆಯಲ್ಲಿ ಸದಸ್ಯರುಗಳಾದ ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ಶಾಂತಿ, ಮಲಯಾಳಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ವಿ. ಶೈಜಾ, ಮಾಜಿ ಅಧ್ಯಕ್ಷರುಗಳಾದ ಪಿ.ಆರ್. ಸುಕುಮಾರ್, ವಿ.ಎ. ಸಂತೋಷ್, ಪಿ.ಸಿ. ಮೋಹನ್ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಅನಿಲ್‌ಕುಮಾರ್ ಇದ್ದರು.