ಮಡಿಕೇರಿ, ಅ. ೩: ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಚೆಪ್ಪುಡಿರ ಅರುಣ್ ಮಾಚಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ ಅಧಿಕಾರಿ ವಹಿಸಿಕೊಂಡರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಕಾಂಚನ್ ಪೊನ್ನಣ್ಣ ಅವರು ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ತೆರಳಿದ ಕಾಂಗ್ರೆಸ್ ಮುಖಂಡರುಗಳು ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಗೆ ಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಮಾನ್ಯ ಉಪಾಧ್ಯಕ್ಷರನ್ನು ಗಣ್ಯರು ಹೂಗುಚ್ಛ ನೀಡುವ ಮೂಲಕ ಅಭಿನಂದಿಸಿದರು. ಉಸ್ತುವಾರಿ ಸಚಿವರು ಹಾಗೂ ಎ.ಎಸ್ ಪೊನ್ನಣ್ಣ ದಂಪತಿಯರು ನೂತನ ಉಪಾಧ್ಯಕ್ಷರಿಗೆ ಶುಭಾಶಯ ಕೋರಿದರು.