ಸೋಮವಾರಪೇಟೆ, ಅ. ೩: ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟಿçÃಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋಜಮ್ಮ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಂತಹ ಶಿಬಿರಗಳು ಶಿಸ್ತಿನ ಜೀವನ, ಶ್ರಮದ ಮೌಲ್ಯ ಹಾಗೂ ಸಮಾಜಸೇವೆ ಬಗ್ಗೆ ಕಲಿಸಿಕೊಡುತ್ತದೆ ಎಂದು ಅಭಿಪ್ರಾಯಿಸಿದರು.
ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವ, ಶಿಸ್ತನ್ನು ಕಲಿಯಬೇಕು. ಸೂಕ್ತ ಮಾರ್ಗದರ್ಶನ ಪಡೆದು ಉತ್ತಮ ಪ್ರಜೆಯಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.
ಹಳೆ ವಿದ್ಯಾರ್ಥಿಗಳಾದ ಎಂ.ಎ. ಮುಸ್ತಫಾ, ಪಾರ್ವತಿ, ಎಂ.ಪಿ. ದೇವಪ್ಪ ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ, ಸಮಯಪಾಲನೆ, ಕಲಿಕೆ, ಹಿರಿಯರು ಮತ್ತು ಶಿಕ್ಷಕರ ಮಾರ್ಗದರ್ಶನ ಪಡೆಯುವ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಉಪನ್ಯಾಸಕ ರಾಜಸುಂದರA, ಹರದೂರು ಗ್ರಾಮ ಪಂಚಾಯಿತಿ ಪಿ.ಡಿ.ಓ. ಪೂರ್ಣಿಮಾ, ಪ್ರಮುಖರಾದ ದೇವಯ್ಯ, ಎಚ್.ಎಸ್. ಗಣೇಶ್ ಇದ್ದರು. ಶಿಬಿರದಲ್ಲಿ ಸಂಸ್ಥೆಯ ೫೦ ವಿದ್ಯಾರ್ಥಿಗಳು ಭಾಗವಹಿಸಿದ್ದರು.