ಮೂರ್ನಾಡು, ಅ. ೪: ಇಲ್ಲಿನ ಸಹಕಾರ ಸ್ಪೋರ್ಟ್ಸ್ ಕ್ಲಬ್ನ ವತಿಯಿಂದ ೧೦೧ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಸ್ಪರ್ಧೆಗಳನ್ನು ತಾ. ೫ ರಂದು (ಇಂದು) ಆಯೋಜಿಸಲಾಗಿದೆ.
ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ ೧.೩೦ಕ್ಕೆ ಜರುಗುವ ಆಟೋಟಗಳ ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಮುಂಡAಡ ಪವಿ ಸೋಮಣ್ಣ ವಹಿಸಲಿದ್ದು, ಕಾರ್ಯಕ್ರಮವನ್ನು ಮೂರ್ನಾಡು ಪೊಲೀಸ್ ಉಪಠಾಣೆಯ ಎಎಸ್ಐ ಮೊಣ್ಣಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮೂರ್ನಾಡಿನ ದಂತ ವೈದ್ಯ ಮೇಚಿರ ಸುಭಾಷ್ ನಾಣಯ್ಯ ಮತ್ತು ಮೂರ್ನಾಡಿನ ಪಶು ವೈದ್ಯಾಧಿಕಾರಿ ಶಿಲ್ಪಶ್ರೀ ಪಾಲ್ಗೊಳ್ಳಲಿದ್ದಾರೆ.