ಶನಿವಾರಸAತೆ, ಅ. ೭: ಸಮೀಪದ ನಂದಿಗುAದ ಗ್ರಾಮದ ಅಭಿವೃದ್ಧಿ ಹಾಗೂ ಗ್ರಾಮ ದೇವತೆ ಶ್ರೀನಂಜುAಡೇಶ್ವರ ಸ್ವಾಮಿ ದೇವಾಲಯದ ಸುತ್ತಮುತ್ತಲ ಪ್ರದೇಶದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗೆ ಶಾಸಕ ಡಾ. ಮಂತರ್ ಗೌಡ ಆಗಮಿಸಿದ್ದ ಸಂದರ್ಭ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿದರು.ಗ್ರಾಮಸ್ಥರ ದೂರುಗಳನ್ನು ಆಲಿಸಿದ ಶಾಸಕರು ಸಂಬAಧಪಟ್ಟ ಇಂಜಿನಿಯರ್‌ಗಳನ್ನು ತಕ್ಷಣ ದೂರವಾಣಿ ಮೂಲಕ ಸಂಪರ್ಕಿಸಿದರು. ಇಂಜಿನಿಯರ್‌ಗಳು ಗ್ರಾಮಕ್ಕೆ ಅದೇ ದಿನ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸುವಂತೆ ಆದೇಶಿಸಿದ ಅನ್ವಯ ಇಂಜಿನಿಯರುಗಳುಗ್ರಾಮಕ್ಕೆ ಧಾವಿಸಿ ಪರಿಶೀಲನೆ ಕೈಗೊಂಡರು. ಗ್ರಾಮದ ಕುಂದುಕೊರತೆ ಬಗ್ಗೆ ಗ್ರಾಮಸ್ಥರ ಅಹವಾಲು ಆಲಿಸಿದ ಶಾಸಕರು ಮೂಲಭೂತ ಸೌಲಭ್ಯಗಳಾದ ಚರಂಡಿ ವ್ಯವಸ್ಥೆ ಹಾಗೂ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದರು. ಗ್ರಾಮಕ್ಕೆ ಮಂಜೂರಾಗಿರುವ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಸರಿಯಾದ ಸ್ಥಳಾವಕಾಶ ದೊರೆತಿಲ್ಲ. ಈ ಕುರಿತು ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಮಾಡಿದ ಮನವಿಗೆ ಸ್ಪಂದಿಸಿ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಭಾನು ಅವರಿಂದ ಮಾಹಿತಿ ಪಡೆದು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾಮದ ಮುಖಂಡರು, ಪ್ರಮುಖರು ಹಾಗೂ ಗ್ರಾಮಸ್ಥರು ಹಾಜರಿದ್ದರು.