ಮಡಿಕೇರಿ, ಅ. ೭: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಮಧ್ಯಸ್ಥಗಾರರಾಗಿ ಸೇವೆ ಸಲ್ಲಿಸಲು ಮಧ್ಯಸ್ಥಗಾರರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಧ್ಯಸ್ಥಗಾರರಾಗಿ ಸೇವೆ ಸಲ್ಲಿಸಲು ಆಸಕ್ತರು ಕ್ರಿಮಿನಲ್, ಸಿವಿಲ್, ವೈವಾಹಿಕ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ವಾಣಿಜ್ಯ ವ್ಯಾಜ್ಯ ವಿವಾದಗಳು, ಪ್ರಕರಣಗಳು ಮುಂತಾದ ಎಲ್ಲಾ ವಿಭಾಗಗಳಲ್ಲಿ ಪರಿಣತಿ ಹೊಂದಿರುವ, ೧೫ ವರ್ಷಗಳಿಗೂ ಹೆಚ್ಚು ಕಾಲ ವಕೀಲ ವೃತ್ತಿಯಲ್ಲಿ ಅನುಭವವಿರುವ ವಕೀಲರು, ನಿವೃತ್ತ ನ್ಯಾಯಾಧೀಶರು, ಮಾಜಿ ಸೈನಿಕರು, ಹಿರಿಯ ವಿಮಾ ಕಂಪೆನಿ ಅಧಿಕಾರಿಗಳು, ಬ್ಯಾಂಕಿAಗ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು/ ಶಿಕ್ಷಕರು ಹಾಗೂ ವೈದ್ಯರು ತಾ. ೧೫ ರ ಸಂಜೆ ೫ ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ೦೮೨೭೨-೨೨೨೩೭೩ ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಶುಭ ತಿಳಿಸಿದ್ದಾರೆ.