ಶನಿವಾರಸಂತೆ, ಅ. ೭: ರೋಟರಿ ಸಂಸ್ಥೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವಂತೆ ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ಮೂಲಕ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಮಹತ್ವದ ಕಾರ್ಯವಾಗಿದೆ ಎಂದು ರೋಟರಿ ಜಿಲ್ಲಾ ಉಪ ಗವರ್ನರ್ ಉಲ್ಲಾಸ್ ಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಸಮೀಪದ ಗೋಪಾಲಪುರ ಗ್ರಾಮದ ಹರ್ಷಿತ್ ಸಭಾಂಗಣದಲ್ಲಿ ಶನಿವಾರಸಂತೆ ರೋಟರಿ ಸಂಸ್ಥೆ ವತಿಯಿಂದ ನಡೆದ ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾದ್ದು ಶಿಕ್ಷಕರು ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆ ನೀಡುತ್ತಾರೆ. ರೋಟರಿ ಸಂಸ್ಥೆ ಕ್ರೀಡಾ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದು ಸಮುದಾಯವನ್ನು ಬೆಳೆಸುತ್ತಿರುವ ಶಿಕ್ಷಕರನ್ನು ಗುರುತಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ವಲಯ ಸೇನಾನಿ ರಾಮಣ್ಣ, ರೊಟೇರಿಯನ್‌ಗಳಾದ ಕೆ.ಪಿ. ಜಯಕುಮಾರ್, ಚಂದ್ರಕಾAತ್ ಹಾಗೂ ಟಿ.ಆರ್. ಪರುಷೋತ್ತಮ್ ಮಾತನಾಡಿ, ರೋಟರಿ ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸನ್ಮಾನಿತ ಸಾಧಕರ ಸಾಧನೆಯನ್ನು ಪರಿಚಯಿಸಿದರು.
ಈ ಸಂದರ್ಭ ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೆಸಿಂತಾ ಸಿಕ್ವೆರಾ ಹಾಗೂ ಕರಾಟೆಯಲ್ಲಿ ರಾಷ್ಟç- ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಾದ ಷರಣಿ ಎ. ಶೆಟ್ಟಿ ಮತ್ತು ವಿವಿಕ್ತ ಚೊಂದಮ್ಮ ಅವರಿಗೆ ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಜೆಸಿಂತಾ ಸಿಕ್ವೆರಾ ಮಾತನಾಡಿ, ಮಕ್ಕಳ ವ್ಯಕ್ತಿತ್ವವನ್ನು ತಿದ್ದಿತೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಪರಿಶ್ರಮ ಅಪಾರವಾಗಿದೆ.
ಶಿಕ್ಷಕರು ಪ್ರಶಸ್ತಿಯನ್ನು ಅರಸಿ ಹೋಗದೇ ಪ್ರಶಸ್ತಿಯೇ ಅವರ ಸೇವೆಯನ್ನು ಗುರುತಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆ ಅಧ್ಯಕ್ಷ ಯಶವಂತ್ ಮಾತನಾಡಿ, ದೇಶಕ್ಕೆ, ಸಮಾಜಕ್ಕೆ ಕೊಡುಗೆ ನೀಡುವ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ, ಗೌರವಿಸುವುದು ರೋಟರಿ ಸಂಸ್ಥೆಯ ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದರು.
ರೋಟರಿ ಸಂಸ್ಥೆ ಸ್ಥಾಪಕ ಅಧ್ಯಕ್ಷ ದಿವಾಕರ್, ರೊಟೇರಿಯನ್‌ಗಳು ಉಪಸ್ಥಿತರಿದ್ದರು. ವಾರ್ಷಿಕ ವರದಿ ಮಂಡಿಸಿದ ಸಂಸ್ಥೆಯ ಕಾರ್ಯದರ್ಶಿ ಚಂದನ್ ಕಾರ್ಯಕ್ರಮ ನಿರ್ವಹಿಸಿದರು. ವಸಂತ ಕುಮಾರಿ ಪ್ರಾರ್ಥಿಸಿ, ಚಂದನ್ ಸ್ವಾಗತಿಸಿ, ವಂದಿಸಿದರು.