ಕುಶಾಲನಗರ, ಅ. ೭: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ನವೆಂಬರ್ ತಿಂಗಳಲ್ಲಿ ಸೋಮವಾರಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. ೮೫ ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು ತಮ್ಮ ಕೈಬರಹದ ಅರ್ಜಿಯೊಂದಿಗೆ ಅಂಕಪಟ್ಟಿ, ಅಧಾರ್ ಕಾರ್ಡ್ ಮತ್ತು ೨ ಫೋಟೋಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು. ಜಿಲ್ಲಾಮಟ್ಟದ ಕ್ರೀಡಾಕೂಟ ನವೆಂಬರ್ ೧೬ ರಂದು ಮತ್ತು ಪತ್ರಿಭಾ ಪುರಸ್ಕಾರ ಕಾರ್ಯಕ್ರಮ ನವೆಂಬರ್ ೨೩ ರಂದು ಸೋಮವಾರಪೇಟೆಯಲ್ಲಿ ನಡೆಯಲಿದೆ.
ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ತಾ. ೨೫ ರೊಳಗೆ ಅರ್ಜಿ ಸಲ್ಲಿಸಬೇಕು. ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಶಾಂಭಶಿವಯ್ಯ ಮಾತನಾಡಿ, ೨೦೨೩-೨೪ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ತಿಳಿಸಿದರು. ಅರ್ಜಿಯನ್ನು ಶಾಂಭಶಿವಯ್ಯ ಟಿ.ಎಸ್. ೫೪೧, ೪ನೇ ಬ್ಲಾಕ್, ಹೌಸಿಂಗ್ ಬೋರ್ಡ್ ಹಿಂಭಾಗ, ಶಿವರಾಮ ಕಾರಂತ ಬಡಾವಣೆ, ಕುಶಾಲನಗರ-೫೭೧೨೩೪ ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಾಂಭಶಿವಯ್ಯ-೯೪೪೮೩೩೬೭೮೧, ಪ್ರವೀಣ್ ಕೊಡ್ಲಿಪೇಟೆ-೯೮೮೦೨೫೫೦೩೧ ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಜಿಲ್ಲಾ ಘಟಕದ ಖಜಾಂಚಿ ಹೆಚ್.ಪಿ. ಉದಯಕುಮಾರ್, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಹೆಚ್ಎಂ. ಮಧುಸೂದನ್, ಕಾರ್ಯದರ್ಶಿ ಎಸ್. ಧರ್ಮೇಂದ್ರ ಇದ್ದರು.