ಮಡಿಕೇರಿ, ಅ. ೭: ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಇತಿಹಾಸವನ್ನು ಸಾರಿದ್ದಾರೆ. ಮಹಾ ಕಾವ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಅವರ ಪರಿಕಲ್ಪನೆ, ದೂರದರ್ಶಿತ್ವ ಸ್ಮರಣೀಯವಾದುದು, ಆಧುನಿಕತೆ ಬೆಳೆದಂತೆ ಭಾರತೀಯ ಹಿಂದಿನ ಇತಿಹಾಸ ಮತ್ತು ಸಂಸ್ಕೃತಿಯನ್ನು ಮರೆಯಬಾರದು. ವಾಲ್ಮೀಕಿ ರಾಮಾಯಣದ ಬಗ್ಗೆ ಅಂತರ್ಜಾಲದಲ್ಲಿ ಸಾಕಷ್ಟು ಮಾಹಿತಿ ದೊರೆಯಲಿದ್ದು, ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ವಿವರಿಸಿದರು. ವಿದ್ಯಾರ್ಥಿಗಳು ಅಧ್ಯಯನ ಕಡೆ ಹೆಚ್ಚು ಗಮನ ನೀಡಬೇಕು. ನಾಗರಿಕ ಸೇವೆಯ ಹುದ್ದೆ ಪಡೆಯಲು ಶ್ರಮಿಸಬೇಕು. ರಾಷ್ಟçದ ಯಾವುದೇ ಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ದರಿರಬೇಕು.

ವಿದ್ಯಾರ್ಥಿಗಳು ಸೇನೆ, ವೈದ್ಯಕೀಯ, ಎಂಜಿನಿಯರಿAಗ್, ವಕೀಲರು, ಪತ್ರಕರ್ತರು ಹಾಗೆಯೇ ರಾಷ್ಟç ಮತ್ತು ಅಂತರ ರಾಷ್ಟಿçÃಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಗ್ಯಾರAಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ವಾಲ್ಮೀಕಿ ರಾಮಾಯಣವನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಬರೆಯುವ ಮೂಲಕ ಇಡೀ ಭಾರತೀಯ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಆ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಅವರನ್ನು ಸದಾ ಸ್ಮರಿಸುವಂತಾಗಬೇಕು; ಮಹರ್ಷಿ ವಾಲ್ಮೀಕಿ ಸೇರಿದಂತೆ ಹಲವು ಮಹಾನ್ ಸಾಧಕರು ಹಾಕಿಕೊಟ್ಟಿರುವ ಹೆಜ್ಜೆ ಗುರುತಿನಂತೆ ನಡೆಯಬೇಕು ಎಂದು ತಿಳಿಸಿದರು. ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಮಾತನಾಡಿ, ವಾಲ್ಮೀಕಿ ಅವರು ಬೇಡ ಸಮಾಜದಲ್ಲಿ ಹುಟ್ಟಿ ರಾಮಾಯಣ ಬರೆಯುವ ಮೂಲಕ ಇಡೀ ವಿಶ್ವಕ್ಕೆ ಸಮಾಜದಲ್ಲಿನ ಬದುಕಿನ ಬಗ್ಗೆ ವಿವರಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅವರು ಕ್ರಿ.ಪೂ.ದಲ್ಲಿಯೇ ಒಳ್ಳೆಯ ನಾಗರಿಕ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಮಹಾನ್ ಮೇಧಾವಿಯಾಗಿದ್ದ ಮಹರ್ಷಿ ವಾಲ್ಮೀಕಿ ಅವರು ಇಡೀ ಮಾನವ ಸಮಾಜಕ್ಕೆ ಸಂಸ್ಕಾರ ಕಲಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅವರು ಎಲ್ಲರ ಸರ್ವ ಶ್ರೇಷ್ಠ ಮುನಿ ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು.

ರಾಮಾಯಣವು ರಾಷ್ಟçದ ಪೌರಾಣಿಕ ಇತಿಹಾಸ ಹೊಂದಿದೆ. ರಾಷ್ಟç ಪ್ರೇಮ ಹಾಗೂ ದೇಶಭಕ್ತಿ ಒಳಗೊಂಡಿದೆ. ಶ್ರೀರಾಮ, ಸೀತೆ ಹಾಗೂ ಲಕ್ಷö್ಮಣರಂತೆ ಬದುಕು ನಡೆಸಬೇಕು ಎಂಬುದು ಎಲ್ಲರ ಆಶಯವಾಗಿದೆ.

ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಶಿಕ್ಷಣದ ಮೂಲಕ ವಿಮೋಚನೆ ಪಡೆಯಬೇಕು. ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ಕಾಣಬೇಕು ಎಂದು ಹೇಳಿದರು. ವಾಲ್ಮೀಕಿ ನಾಯಕ ಸಂಘದ ಜಿಲ್ಲಾ ಅಧ್ಯಕ್ಷ ಅಶೋಕ್ ಮಾತನಾಡಿ, ವಾಲ್ಮೀಕಿ ರಾಮಾಯಣವು ರಾಷ್ಟçದ ಸಂಸ್ಕೃತಿ, ನಾಡು, ನುಡಿ ಹಾಗೂ ಸಹೋದರತ್ವ ಹೊಂದಿದ್ದು, ಇದನ್ನು ಅರಿತು ನಡೆದರೆ ರಾಷ್ಟç ರಾಮರಾಜ್ಯ ಆಗಲಿದೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಬೇಡರ ಕಣ್ಣಪ್ಪ, ಏಕಲವ್ಯ, ಚಿತ್ರದುರ್ಗದ ಕೋಟೆ ಹೀಗೆ ಹಲವು ಐತಿಹ್ಯಗಳನ್ನು ಸಮಾಜದಲ್ಲಿ ಕಾಣಬಹುದಾಗಿದೆ ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣವೇ ಆಸ್ತಿಯಾಗಿದ್ದು, ವಿದ್ಯಾರ್ಥಿಗಳು ಕೇಂದ್ರ ಮತ್ತು ರಾಜ್ಯ ನಾಗರಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ಯಶಸ್ಸು ಗಳಿಸುವಂತಾಗಬೇಕು ಎಂದರು.

ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೆಗೌಡ, ಭಾಗಮಂಡಲ ಲ್ಯಾಂಪ್ ಸೊಸೈಟಿಯ ಮಿಟ್ಟು ರಂಜಿತ್, ಕುರುಬ ಸಮಾಜದ ಜಿಲ್ಲಾ ಅಧ್ಯಕ್ಷ ಗಂಗಾಧರ, ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲ ಮೇವಾಲಾಲ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ, ಸಮಾಜದ ಮುಖಂಡರಾದ ಪರಮೇಶ್, ಚಂದ್ರು, ದೇವರಾಜು ಇತರರು ಇದ್ದರು.

೨೦೨೪-೨೫ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನಗದು ಬಹುಮಾನ ನೀಡಲಾಯಿತು. ಹಾಗೆಯೇ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರನ್ನು ಗೌರವಿಸಲಾಯಿತು. ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಗಮನ ಸೆಳೆದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಸ್ವಾಗತಿಸಿದರು, ಪವನ್ ಕುಮಾರ್ ನಿರೂಪಿಸಿದರು, ತಿತಿಮತಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.