ಮಡಿಕೇರಿ, ಅ. ೧೨: ರಾಷ್ಟಾçದ್ಯಂತ ಮತಗಳ್ಳತನವಾಗಿರುವ ಬಗ್ಗೆ ಸಹಿ ಸಂಗ್ರಹದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್ ಹೈ ಕಮಾಂಡ್ ಸೂಚನೆಯ ಹಿನ್ನಲೆಯಲ್ಲಿ ಮಡಿಕೇರಿಯ ಇಂದಿರಾ ಗಾಂಧಿ ವೃತ್ತದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್‌ನಿAದ ಸಹಿ ಸಂಗ್ರಹ ಅಭಿಯಾನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಶಾಸಕದ್ವಯರ ಸಮ್ಮುಖದಲ್ಲಿ ಚಾಲನೆ ನೀಡಿದರು.

ಸಹಿ ಮಾಡಿದ ನಂತರ ಮಾತನಾಡಿದ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕರ್ನಾಟಕದ ಮಹದೇವಪುರ ಕ್ಷೇತ್ರದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಪಮಾನಿಸಿದೆ ಎಂದು ಹೇಳಿದರು. ಚುನಾವಣಾ ಆಯೋಗದಿಂದ ಇಂತಹ ನಿರ್ಲಕ್ಷö್ಯವನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ ಅವರು ಇಂತಹ ಅವಾಂತರಗಳು ಕೊನೆಗೊಳ್ಳಬೇಕು ಎಂದು ತಿಳಿಸಿದರು,

ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಮತಗಳ್ಳತದ ವಿರುದ್ಧ ಹೋರಾಟ ಅಂತಿಮ ಹಂತದವರೆಗೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಅರುಣ್ ಮಾಚಯ್ಯ, ವಿ.ಪಿ. ಶಶಿಧರ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಂಜುನಾಥ್ ಗುಂಡೂರಾವ್, ತೆನ್ನಿರ ಮೈನಾ, ಪ್ರಕಾಶ್ ಆಚಾರ್ಯ, ಪುಲಿಯಂಡ ಜಗದೀಶ್, ಸುರಯ್ಯ ಅಬ್ರಾರ್. ಪ್ರಭು ರೈ, ಮಂಡಿರ ಸದಾ ಮುದ್ದಪ್ಪ, ಜಿ.ಸಿ. ಜಗದೀಶ್, ಕಾಳಿಮಾಡ ಪ್ರಶಾಂತ್, ಅಣ್ಣಳಮಾಡ ಲಾಲ ಅಪ್ಪಣ್ಣ, ಜಯರಾಜ್ ವಿ.ಪಿ. ಸುರೇಶ್, ಅಪ್ರು ರವೀಂದ್ರ ಸೇರಿದಂತೆ ಪ್ರಮುಖರು, ಕಾರ್ಯಕರ್ತರು ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.