ಮಡಿಕೇರಿ ಅ. ೧೪: ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಮೂಕರು ಮತ್ತು ಶ್ರವಣ ಮಾಂಧ್ಯರ ಸಂಘದ ವತಿಯಿಂದ ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಕೆ.ಕೆ. ಶಂಕರ್ ನಾರಾಯಣ ಅವರನ್ನು ಗೌರವಿಸಲಾಯಿತು. ಸಂಘದ ವತಿಯಿಂದ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ವಿಶ್ವ ಕಿವುಡರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಸ್ಮರಣಿಕೆ ನೀಡಲಾಯಿತು. ಈ ಸಂದರ್ಭ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಹೆಚ್. ಶಂಕರ್, ಅಧ್ಯಕ್ಷ ಕೆ.ಎಸ್. ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್. ದೇವರಾಜ್, ಅರಣು ಇಲಾಖೆ ಸಿಸಿಎಫ್ ಹನುಮಂತಪ್ಪ, ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ನವೀನ್ ಕುಮಾರ್, ಶಿವಮೊಗ್ಗ ಮೂಕರ ಮತ್ತು ಶ್ರವಣಮಾಂಧ್ಯ ಸಂಘದ ಗೌರವಾಧ್ಯಕ್ಷ ಎಸ್.ಎಸ್. ಸಂದೇಶ್, ಹೆಲ್ಪಿಂಗ್ ಹ್ಯಾಂಡ್ಸ್ನ ನಂದಿನಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಶ್ರವಣ ಮಾಂದ್ಯರು ಹಾಜರಿದ್ದರು.