ಮಡಿಕೇರಿ, ಅ. ೧೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ, ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ತಾ. ೧೬ ರಂದು (ನಾಳೆ) ಬೆಳಿಗ್ಗೆ ೯.೩೦ ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಶಾಸಕರಾದ ಡಾ. ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ೪ಆರನೇ ಪುಟಕ್ಕೆ (ಮೊದಲ ಪುಟದಿಂದ) ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ, ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಚಿತ್ರ, ಮೈ ಭಾರತ್‌ನ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಹಾಗೂ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ.