ಕೂಡಿಗೆ, ಅ. ೧೪: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿಧೋÃದ್ದೇಶ ಸಹಕಾರ ಸಂಘ, ಬಸವನಹಳ್ಳಿ ಸಹಕಾರ ಸಂಘದ ಆವರಣದಲ್ಲಿ ರೂ. ೨೫ ಲಕ್ಷ ವೆಚ್ಚದ ನೂತನ ಅಂಗಡಿ ಮಳಿಗೆಯ ಕಟ್ಟಡದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಸಹಕಾರ ಇಲಾಖೆಯ ಸಹಕಾರದೊಂದಿಗೆ ಬಸವನಹಳ್ಳಿ ಸಹಕಾರ ಸಂಘದ ಆವರಣದಲ್ಲಿ ನೂತನ ಮಾರಾಟ ಮಳಿಗೆಗಳ ಕಟ್ಟಡದ ಕಾಮಗಾರಿಯ ನಂತರ ಸ್ಥಳೀಯ ಅರಣ್ಯ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವುದು ಸೂಕ್ತ ಎಂದು ತಿಳಿಸಿದರು.

ಈ ಸಂದರ್ಭ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್ ಮಾತನಾಡಿ, ಸಹಕಾರ ಸಂಘಗಳ ಬೆಳವಣಿಗೆಗೆ ಸದಸ್ಯರುಗಳ ಸಹಕಾರ ಬಹುಮುಖ್ಯ, ಮುಂದಿನ ದಿನಗಳಲ್ಲಿ ಮಾರಾಟ ಕಟ್ಟಡದ ಜೊತೆಯಲ್ಲಿ ಪ್ರವಾಸೋದ್ಯಮಕ್ಕೆ ಅನುಕೂಲವಾಗುವ ರೀತಿಯಲ್ಲಿ ಸಂಘದ ಆವರಣದಲ್ಲಿರುವÀ ಜಾಗದಲ್ಲಿ ಇರುವುದರಿಂದ ಪ್ರವಾಸೋದ್ಯಮ ಇಲಾಖೆಯ ಸಹಕಾರದೊಂದಿಗೆ ಅತಿಥಿ ಗೃಹ ನಿರ್ಮಾಣದ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯ. ಮಂಜುನಾಥ ಗುಂಡೂರಾವ್, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಸಹಕಾರ ಸಂಘದ ಉಪಾಧ್ಯಕ್ಷೆ ಕಾವೇರಮ್ಮ, ನಿರ್ದೇಶಕರಾದ ಸಿ.ಕೆ. ಉದಯಕುಮಾರ್, ಬಿ.ಎ. ಗಂಗಾಧರ್, ಎಸ್.ಆರ್ .ಕಮಲ, ಕಾಳಯ್ಯ, ದೇವಿರಮ್ಮ, ಬಿ.ಎಸ್. ಚಂದ್ರ, ರಾಜು, ಶ್ಯಾಮ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರಕ್ಷಿತ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಆರ್. ಸುನಿಲ್ ರಾವ್, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಪ್ರವೀಣ್, ಗುಡ್ಡೆಹೊಸೂರು ದೇವಾಲಯ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ, ಶಿವಕುಮಾರ್, ತಮ್ಮಯ್ಯ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಹನಿ ಕುಮಾರ್, ನಿರ್ಮಿತಿ ಕೇಂದ್ರದ ಮುಖ್ಯ ಇಂಜಿನಿಯರ್ ಸಚಿನ್ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು, ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.