ಗೋಣಿಕೊಪ್ಪ ವರದಿ, ಅ. ೧೪: ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರತಿನಿಧಿ ಪತ್ರಿಕೆ ಜಿಲ್ಲಾ ವರದಿಗಾರ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧ ಪುನರಾಯ್ಕೆಯಾದರು.

ಮಂಗಳವಾರ ಕೊಡಗು ಹಿಂದು ಮಲಯಾಳಿ ಸಮಾಜ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ನಡೆಯಿತು.

ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್, ಖಜಾಂಚಿಯಾಗಿ ವಿ.ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಅವಿರೋಧವಾಗಿ ಆಯ್ಕೆಯಾಗಿದರು.

ಚುನಾವಣಾ ಅಧಿಕಾರಿಯಾಗಿ ಗೋಣಿಕೊಪ್ಪ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಕೆ. ಪ್ರತಾಪ್, ಸಹಾಯಕ ಚುನಾವಣಾಧಿಕಾರಿಯಾಗಿ ನಿವೃತ್ತ ಸಿಇಒ, ಬಿ.ಇ. ಕಿರಣ್ ಕಾರ್ಯನಿರ್ವಹಿಸಿದರು. ವೀಕ್ಷಕರಾಗಿ ಸುನಿಲ್ ಪೊನ್ನೇಟಿ ಪಾಲ್ಗೊಂಡಿದ್ದರು. ಚುನಾಯಿತರಿಗೆ ಪ್ರಮಾಣ ಪತ್ರ ವಿತರಿಸಿ ಶುಭಕೋರಲಾಯಿತು.