ಕೂಡಿಗೆ, ಅ. ೧೪: ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಅವರಿಗೆ ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಆನರ್ ಆಫ್ ಅಶೋಕ ಪ್ರಶಸ್ತಿ ೨೦೨೫ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಶ್ಲಾಘನೀಯ ಶ್ರೇಷ್ಠತೆಯನ್ನು ಪ್ರದರ್ಶಿಸಿದ ಅಧಿಕಾರಿಗಳು, ಸೈನಿಕರು, ಆಡಳಿತಗಾರರು ಮತ್ತು ಶಿಕ್ಷಣ ತಜ್ಞರಿಗೆ ಮೀಸಲಾಗಿದೆ.
ಪ್ರಶಸ್ತಿಗೆ ಶೈಕ್ಷಣಿಕ ಕ್ಷೇತ್ರದ ಉತ್ತಮ ನಿರ್ವಹಣೆ ಮತ್ತು ಗಮನಾರ್ಹ ಸೇವೆ ಸಲ್ಲಿಸುತ್ತಿರುವ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಲಭಿಸಿದೆ. ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಪಾಲ ಕಲ್ರಾಜ್ ಮಿಶ್ರಾ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಜೇಂದರ್ ಜೈನ್, ಲೆಫ್ಟಿನೆಂಟ್ ಜನರಲ್ ಎಸ್.ಕೆ. ಸೈನಿ, ಭಾರತೀಯ ಸೇನಾ ಸಿಬ್ಬಂದಿ ಮಾಜಿ ಉಪಾಧ್ಯಕ್ಷ ಲೆಫ್ಟಿನೆಂಟ್ ಜನರಲ್ ಎಸ್.ಕೆ. ಸೈನಿ, ಏರ್ ಮಾರ್ಷಲ್ ಜಿ.ಎಸ್. ಬೇಡಿ, ಲೆಫ್ಟಿನೆಂಟ್ ಜನರಲ್ ಕರಣ್ಬೀರ್ ಸಿಂಗ್ ಬ್ರಾರ್ ಸೇರಿದಂತೆ ಇನ್ನಿತರರು ಪ್ರಶಸ್ತಿ ಪ್ರದಾನ ಮಾಡಿದರು.