ಭಾಗಮAಡಲ, ಅ. ೧೪ : ಸಮೀಪದ ಚೇರಂಬಾಣೆಯಲ್ಲಿ ಮಂಗಳವಾರ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಸೈನಾರ್ ಬಂಧಿತ ಆರೋಪಿಯಾಗಿದ್ದಾನೆ. ಸಂತೆಯ ದಿನವಾದ ಮಂಗಳವಾರ ಈತ ಚೇರಂಬಾಣೆಯಲ್ಲಿ ಸ್ಕೂಟರ್‌ನಲ್ಲಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದ. ಕಾವೇರಿ ಸಂಕ್ರಮಣದ ಅವಧಿಯಲ್ಲಿ ಸ್ಥಳೀಯರು ವಿವಿಧ ಕಟ್ಟುಪಾಡುಗಳನ್ನು ಆಚರಿಸುತ್ತಿದ್ದರೂ ಕೆಲವೆಡೆ ನಿರಂತರವಾಗಿ ಗೋ ಹತ್ಯೆ, ಗೋಮಾಂಸ ಮಾರಾಟ, ಅಕ್ರಮ ಗೋ ಸಾಗಾಟ ನಡೆಯುತ್ತಿದೆ. ಪದೇ ಪದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿದ್ದರೂ ಈ ಬಗ್ಗೆ ಯಾರೂ ಕ್ರಮ ವಹಿಸುತ್ತಿಲ್ಲ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಕ್ರಮಕ್ಕೆ ಹಿಂ.ಜಾ.ವೇ. ಆಗ್ರಹ

ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸದಸ್ಯ ಕುಕ್ಕೇರ ಅಜಿತ್ ಒತ್ತಾಯಿಸಿದ್ದಾರೆ.

ಸೋಮವಾರಪೇಟೆಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆಯಾದ ೨೪ ಗಂಟೆಯೊಳಗೆ ಚೇರಂಬಾಣೆಯಲ್ಲಿ ಹಾಡಹಗಲೇ ಸ್ಕೂಟರ್‌ನಲ್ಲಿ ಗೋ ಮಾಂಸ ಮಾರಾಟ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ನಿರಂತರವಾಗಿ ಗೋಹತ್ಯೆ, ಗೋ ಮಾಂಸ ಮಾರಾಟ, ಗೋ ಸಾಗಾಟ ನಡೆಯುತ್ತಿದೆ. ಕಾನೂನು ಬಾಹಿರ ಕೃತ್ಯಗಳನ್ನು ತಡೆಗಟ್ಟಬೇಕಾದ ಪೊಲೀಸ್ ಇಲಾಖೆ ಕೇವಲ ಹಿಂದೂಗಳ ಧಾರ್ಮಿಕ ಆಚರಣೆಗಳಾದ ಗಣೇಶೋತ್ಸವ, ದಸರಾ ಸಂದರ್ಭ ದಿಢೀರ್ ಕಾನೂನು ಪಾಲನೆ ನೆಪಹೇಳಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಹೇರುತ್ತಿದೆ. ವಿಶೇಷವಾಗಿ ಕಾವೇರಿ ಸಂಕ್ರಮಣ ಸಮಯದಲ್ಲಿ ಕೊಡಗಿನಲ್ಲಿ ಗೋ ಹತ್ಯೆ, ಗೋ ಮಾಂಸ ಮಾರಾಟ, ಅಕ್ರಮ ಗೋ ಸಾಗಾಟ ನಿರಂತರವಾಗಿ ನಡೆಯುತ್ತಾ ಬಹುಸಂಖ್ಯಾತರ ಧಾರ್ಮಿಕ ನಂಬಿಕೆಗೆ ಘಾಸಿಯಾಗುತ್ತಿದೆ; ಸ್ಥಳೀಯ ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡದೆ ಇರುವುದು ಮತ್ತು ಅಪರಾಧಗಳನ್ನು ತಡೆಗಟ್ಟಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡದೆ ಇರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಪ್ರಕರಣಕ್ಕೆ ಸಂಬAಧಿಸಿದ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಹೋರಾಟ ಅನಿವಾರ್ಯವಾದೀತು ಎಂದು ಕುಕ್ಕೇರ ಅಜಿತ್ ಎಚ್ಚರಿಸಿದ್ದಾರೆ.