ಮಡಿಕೇರಿ, ಅ. ೧೪: ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ತಾ. ೧೫ ರಂದು (ಇಂದು) ಇಲ್ಲಿನ ರಾಜ್ದರ್ಶನ್ ಸಭಾಂಗಣದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಔತಣಕೂಟ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭಾ ಸದಸ್ಯ ಅರುಣ್ ಶೆಟ್ಟಿ ತಿಳಿಸಿದ್ದಾರೆ.
ದಸರಾ ಸಂದರ್ಭ ಪೌರಕಾರ್ಮಿಕರು ಹಗಲಿರುಳು ಶ್ರಮಿಸಿದ್ದು, ಅವರಿಗಾಗಿ ಔತಣಕೂಟವನ್ನು ಏರ್ಪಡಿಸಲಾಗಿದೆ. ಈ ವೇಳೆ ಪೌರಕಾರ್ಮಿಕರಾದ ಡಿ. ಲಕ್ಷಿö್ಮ ಹಾಗೂ ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೇರ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಸದಸ್ಯ ಮುಸ್ತಾಫ, ಪೌರಾಯುಕ್ತ ರಮೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.