ಬೆಂಗಳೂರು, ಅ. ೧೫: ವಿದ್ಯಾರ್ಥಿ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅತ್ಯಂತ ಮಹತ್ತರ ಘಟ್ಟವಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವು ಉತ್ತಮವಾಗಿರುತ್ತದೆ. ಒಂದು ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಅಂತಹ ವಿದಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ಕುತ್ತುಂಟಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲೇಬೇಕೆAದು ಪೋಷಕರು ಹಾಗೂ ಶಿಕ್ಷಕರ ಅಭಿಲಾಷೆಯಾಗಿರುತ್ತದೆ. ವಿದ್ಯಾರ್ಥಿಗಳು ಕೂಡ ಉತ್ತೀರ್ಣರಾಗಲೇಬೇಕೆಂದು ಶ್ರಮವಹಿಸಿ ಓದುತ್ತಾರೆ. ಉತ್ತಮ ಅಂಕಗಳೊAದಿಗೆ ತೇರ್ಗಡೆ ಹೊಂದುತ್ತಾರೆ. ಆದರೆ ಅದೆಷ್ಟೊ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಅಗತ್ಯವಿರುವ ಕನಿಷ್ಟ ಅಂಕವನ್ನು ಗಳಿಸಲಾಗದೇ ಅನುತ್ತೀರ್ಣರಾಗುತ್ತಿದ್ದಾರೆ. ಬಹಳಷ್ಟು ಮಂದಿ ಕನಿಷ್ಟ ಅಂಕಕ್ಕೆ ಒಂದೆರಡು ಅಂಕಗಳು ಕಡಿಮೆಯಾಗಿ ಉತ್ತೀರ್ಣರಾಗಲು ವಿಫಲರಾಗುತ್ತಾರೆ. ನಂತರ ತಮ್ಮ ಶಿಕ್ಷಣವನ್ನು ಮೊಟಕುಗೊಳಿಸುತ್ತಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿಕ್ಷಣ ಇಲಾಖೆ ಮಹತ್ತರ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. ೩೩ ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಈ ನಿಯಮ ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಶೇ. ೩೩ ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಎಂದು ಘೋಷಿಸಲಾಗುವುದು. ೬೨೫ಕ್ಕೆ ೨೦೬ ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ.
ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ.೩೩ ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ೪ಮೂರನೇ (ಮೊದಲ ಪುಟದಿಂದ)
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. ೩೩ರಷ್ಟು ಉತ್ತೀರ್ಣದ ಅಂಕ ನಿಗದಿ ಮಾಡಲಾಗಿದೆ.
ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. ೩೩ರಷ್ಟು ಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ. ೨೦೨೫-೨೬ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು, ಪುನರಾವರ್ತಿತರು ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.