ಬೆಂಗಳೂರು, ಅ. ೧೫: ನಾಡಿನ ಜೀವ ನದಿ ತಾಯಿ ಕಾವೇರಿ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ನಡೆಯುವ ಪವಿತ್ರ ಕಾವೇರಿ ತೀರ್ಥೋದ್ಭವದ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಈ ಪುಣ್ಯ ಕಾಲದಲ್ಲಿ, ತಾಯಿ ಕಾವೇರಿಯು ರಾಜ್ಯಕ್ಕೆ ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಮಳೆ-ಬೆಳೆಯನ್ನು ದಯಪಾಲಿಸಿ, ಜಲಸಮಸ್ಯೆಗಳು ನಿವಾರಣೆಯಾಗಲಿ ಎಂದು ಪ್ರಾರ್ಥಿಸುತ್ತೇನೆ. ಜಿಲ್ಲಾಡಳಿತವು ಭಕ್ತರ ಅನುಕೂಲಕ್ಕೆ ಮತ್ತು ಸುರಕ್ಷತೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.