ಸೋಮವಾರಪೇಟೆ, ಅ. ೧೫: ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರುಗಳಾದ ಕರ್ಕಳ್ಳಿಯ ನಿರ್ಮಲ ಪ್ರಕಾಶ್ ಹಾಗೂ ಶನಿವಾರಸಂತೆಯ ಲಾವಣ್ಯ ಮೋಹನ್ ಅವರುಗಳನ್ನು ಒಕ್ಕಲಿಗರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕೃಷಿ ಕ್ಷೇತ್ರದಲ್ಲಿನ ಸಾಧನೆಗಾಗಿ ನಿರ್ಮಲ ಪ್ರಕಾಶ್ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಲಾವಣ್ಯ ಮೋಹನ್ ರಾಜ್ಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದರು.

ಈ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಅವರು ಸಂಘದ ಸಭೆಯಲ್ಲಿ ಸನ್ಮಾನಿಸಿದರು. ಉಪಾಧ್ಯಕ್ಷ ಎಸ್.ಬಿ. ಭರತ್ ಕುಮಾರ್, ಕಾರ್ಯದರ್ಶಿ ಎನ್.ಬಿ. ಗಣಪತಿ ಹಾಗೂ ಪದಾಧಿಕಾರಿಗಳು ಇದ್ದರು.