ಕುಶಾಲನಗರ, ಅ. ೧೫: ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿ ಇಡುವಲ್ಲಿ ಪ್ರತಿಯೊಬ್ಬರು ಮುತುವರ್ಜಿ ವಹಿಸಬೇಕು ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಕರೆ ನೀಡಿದರು.
ಜಿಲ್ಲೆಯಾದ್ಯಂತ ಸ್ವಚ ಕೊಡಗು, ಸುಂದರ ಕೊಡಗು ಅಭಿಯಾನದ ಹಿನ್ನೆಲೆ ಕುಶಾಲನಗರದಲ್ಲಿ ಚೇಂಬರ್ ಸ್ಥಾನೀಯ ಸಮಿತಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಆಗಿದೆ ಎಂದರು. ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷ ಕೆ.ಎಸ್. ನಾಗೇಶ್, ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರು, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಬಿ.ಜಿ. ಮಂಜುನಾಥ್ ಗುಂಡೂರಾವ್, ಪುರಸಭೆಯ ಮುಖ್ಯಾಧಿಕಾರಿ ಟಿ.ಜೆ.ಗಿರೀಶ್, ಹಿರಿಯ ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.
ಪಟ್ಟಣದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭಗೊAಡ ಸ್ವಚ್ಚತಾ ಕಾರ್ಯವು ಪಟ್ಟಣದ ಪ್ರಮುಖ ಬೀದಿ, ಅಯ್ಯಪ್ಪ ಸ್ವಾಮಿ ರಸ್ತೆ, ರಥಬೀದಿ, ಖಾಸಗಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತೆ ನಡೆಸಲಾಯಿತು.