ಶನಿವಾರಸಂತೆ, ಅ. ೧೫: ಸಮೀಪದ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನಂದಿನೇಸರ ಉದ್ಯಾನವನದಲ್ಲಿ ಗಂಗಾ ಆರತಿ - ಬಾಗಿನ ಸಮರ್ಪಣಾ ಕಾರ್ಯಕ್ರಮ ತಾ.೧೭ರಂದು ಬೆಳಿಗ್ಗೆ ೧೧ ಗಂಟೆಯಿAದ ನಡೆಯಲಿದೆ.
ಅಂದು ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವದ ಅಮೃತ ಘಳಿಗೆಯಲ್ಲಿ ನಂದಿನೇಸರ ಉದ್ಯಾನವನದಲ್ಲಿ ಗಂಗಾ ಆರತಿ - ಬಾಗಿನ ಸಮರ್ಪಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಿಗ್ಗೆ ೧೧ ಗಂಟೆಗೆ ಗಣಪತಿ ದೇವಸ್ಥಾನದಿಂದ ಗ್ರಾಮದ ಸುಮಂಗಲಿಯರಿAದ ದೀಪ ಪ್ರಜ್ವಲನ, ಪೂರ್ಣಕುಂಭ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ೧-೪೪ಕ್ಕೆ ಆರತಿ ಮತ್ತು ಗಂಗಾ ಮಾತೆಗೆ ಬಾಗಿನ ಅರ್ಪಣೆ, ೨ ಗಂಟೆಗೆ ಪ್ರಸಾದ ವಿನಿಯೋಗವಿರುತ್ತದೆ.ಮಧ್ಯಾಹ್ನ ೩ ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಹಾಸನ ಶ್ರೀಆದಿಚುಂಚನಗಿರಿ ಶಾಖಾಮಠದ ಶಂಭುನಾಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರAಜನ್ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಿ. ಸೋಮಶೇಖರ್ ವಚನ ಸಾಹಿತ್ಯ ವಿಷಯದ ಬಗ್ಗೆ ಹಾಗೂ ಅಂತರರಾಷ್ಟಿçÃಯ ಶಿಕ್ಷಣ ತಜ್ಞ ಎ.ಎಚ್.ಸಾಗರ್ ಸಮರಸವೇ ಜೀವನ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್. ಚಂದ್ರಮೌಳಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಅರಕಲಗೂಡು ಅರೆಮಾದನಹಳ್ಳಿ ವಿಶ್ವಕರ್ಮ ಜಗತ್ ಗುರುಪೀಠದ ಅನಂತ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಕಲ್ಲುಮಠದ ಮಹಾಂತಸ್ವಾಮೀಜಿ, ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ, ಕಲ್ಲಳ್ಳಿಮಠದ ರುದ್ರಮುನಿ ಸ್ವಾಮೀಜಿ, ಮಾದ್ರೆ ಮುದ್ದಿನಕಟ್ಟೆ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮನೆಹಳ್ಳಿಮಠ ತಪೋವನ ಕ್ಷೇತ್ರದ ಮಹಾಂತ ಶಿವಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕೊಡ್ಲಿಪೇಟೆ, ಬ್ಯಾಡಗೊಟ್ಟ ಮತ್ತು ಬೆಸೂರು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ.
ಸಂಜೆ ೫-೩೦ ರಿಂದ ಬೆಂಗಳೂರಿನ ಗಾನಗಂಗಾ ತಂಡದ ಪಂಪಾಪತಿ ಗದ್ದಿ, ಅರ್ಪಿತಾ ಮತ್ತು ಸಂಗಡಿಗರಿAದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.