ಸಿದ್ದಾಪುರ, ಅ. ೧೫: ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕೆಂದು ಶಾಸಕ ಡಾ.ಮಂತರ್ ಗೌಡ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ ಸೇತುವೆ ಬಳಿ ರೂ ೨ ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಮಗಾರಿಗಳು ನಡೆಯುವ ಸಂದರ್ಭ ಕಳಪೆ ಗುಣಮಟ್ಟದ ಕಾಮಗಾರಿಗಳು ನಡೆಯದಂತೆ ಗ್ರಾಮಸ್ಥರು ಎಚ್ಚರ ವಹಿಸಬೇಕೆಂದರು.

ಲೋಕೋಪಯೋಗಿ ಇಲಾಖೆ ವತಿಯಿಂದ ರೂ.೨ ಕೋಟಿ ವೆಚ್ಚದಲ್ಲಿ ನೆಲ್ಲಿಹುದಿಕೇರಿ ಗ್ರಾಮದ ರಸ್ತೆ ಅಭಿವೃದ್ಧಿ ಕಾರ್ಯವನ್ನು ನಡೆಸಲಾಗುತ್ತಿದೆ. ಈಗಾಗಲೇ ಅಭ್ಯತ್‌ಮಂಗಲ ಒಂಟಿಯAಗಡಿ ರಸ್ತೆ ಅಭಿವೃದ್ಧಿ ಹಾಗೂ ಮಡಿಕೇರಿ - ಚೆಟ್ಟಳ್ಳಿ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ನಡೆಸಲಾಗುವುದು. ಹಲವಾರು ರಸ್ತೆಗಳು ಸುಮಾರು ವರ್ಷಗಳಿಂದ ಹದಗೆಟ್ಟಿವೆ. ಈ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾದರೂ ಕೂಡ ನಿರಂತರ ಮಳೆಯಿಂದಾಗಿ ಕಾಮಗಾರಿ ನಡೆಸಲು ವಿಳಂಬವಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷಿö್ಮ. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎ.ಕೆ. ಹಕೀಂ. ಸಫೀಯಾ. ಕೋಯ, ಅಫ್ಸೆಲ್ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುAಡಸ್ವಾಮಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸುನಿತಾ ಮಂಜುನಾಥ್, ಕೆ.ಪಿ.ಸಿ.ಸಿ. ಸದಸ್ಯ ಜೋಸೆಫ್ ಶ್ಯಾಂ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎಂ. ಬಶೀರ್, ಕುಶಾಲನಗರ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಸಂಶುದ್ದೀನ್, ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಂಗ್ರೆಸ್ ಮುಖಂಡ ಮುಂಡ್ರುಮನೆ ಸುದೇಶ್ ನೆಲ್ಲಿಹುದಿಕೇರಿ ಕೆ.ಪಿ.ಎಸ್. ಶಾಲೆಯ ಉಪಾಧ್ಯಕ್ಷ ಪಿ.ಕೆ. ಮುಸ್ತಫ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು. ಪಿ.ಕೆ. ಮುಸ್ತಫ ಸ್ವಾಗತಿಸಿ, ವಂದಿಸಿದರು.