ಮಡಿಕೇರಿ, ಅ. ೧೬: ಶ್ರೀ ತಲಕಾವೇರಿ ಕ್ಷೇತ್ರದಲ್ಲಿ ತಾ. ೧೭ ರಂದು (ಇಂದು) ಜರುಗಲಿರುವ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಹಾಗೂ ಮುಜರಾಯಿ ಇಲಾಖಾ ಸಚಿವರಾದ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಪ್ರಮುಖರುಗಳು ಭಾಗಿಗಳಾಗುತ್ತಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪರಾಹ್ನ ೧೨.೩೦ಕ್ಕೆ ಹೆಲಿಕಾಪ್ಟರ್‌ನಲ್ಲಿ ಭಾಗಮಂಡಲದ ಹೆಲಿಫ್ಯಾಡ್‌ನಲ್ಲಿ ಬಂದಿಳಿಯಲಿದ್ದು, ನಂತರ ತಲಕಾವೇರಿಗೆ ತೆರಳಿದ್ದಾರೆ. ತೀರ್ಥೋದ್ಭವದ ಬಳಿಕ ಮತ್ತೆ ಅವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರೂ ತಲಕಾವೇರಿ ತೀರ್ಥೋದ್ಭವದಲ್ಲಿ ಪಾಲ್ಗೊಳ್ಳುತ್ತಿದ್ದು, ಇಬ್ಬರು ನಾಯಕರ ಜಿಲ್ಲಾ ಪ್ರವಾಸ ವಿವರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.