ಮಡಿಕೇರಿ, ಅ. ೧೬: ದೇಶಭಕ್ತ ಸಂಘಟನೆಯಾಗಿರುವ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಚಟುವಟಿಕೆಗೆ ಸರ್ಕಾರಿ ಜಾಗಗಳಲ್ಲಿ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರ ಹೇಳಿಕೆ ಖಂಡನೀಯವಾಗಿದ್ದು, ಅವರು ಅಭಿವೃದ್ಧಿ ಬಗ್ಗೆ ಗಮನ ಹರಿಸಲಿ ಅದನ್ನು ಬಿಟ್ಟು ಹಿಂದೂ ಸಮಾಜವನ್ನು ಕೆಣಕುವುದು ಬೇಡ ಎಂದು ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಎಚ್ಚರಿಸಿದರು.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ನ ಕೆಲವು ರಾಷ್ಟçಭಕ್ತರನ್ನು ತುಚ್ಯವಾಗಿ ಕಾಣುತ್ತಿದ್ದಾರೆ. ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯವನ್ನು ಓಲೈಸುತ್ತಾ ಹಿಂದೂಗಳನ್ನು ಅವಹೇಳನ ಮಾಡುವ ಕೆಲಸ ಮಾಡುತ್ತಿದೆ ಎಂದು ರವಿ ಕುಶಾಲಪ್ಪ ಆರೋಪಿಸಿದರು. ಆರ್‌ಎಸ್‌ಎಸ್ ಬಗ್ಗೆ ಟೀಕಿಸುವವರು ಮೊದಲು ಆರ್‌ಎಸ್‌ಎಸ್‌ನ ಇತಿಹಾಸವನ್ನು ತಿಳಿದುಕೊಳ್ಳಲಿ. ೧೦೦ ವರ್ಷಗಳನ್ನು ಪೂರೈಸಿರುವ ಈ ಸಂಘಟನೆಯ ಕಾರ್ಯಚಟುವಟಿಕೆಗೆ ಸರ್ಕಾರ ಜಾಗಗಳಲ್ಲಿ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ತಾಕತಿದ್ದರೆ ನಿರ್ಧಾರ ಕೈಗೊಳ್ಳಲಿ ಎಂದು ಸವಾಲೆಸೆದ ರವಿ ಕುಶಾಲಪ್ಪ ಹಿಂದೂಗಳು ಒಗ್ಗಾಟ್ಟಾಗಬೇಕು ಎಂದು ಕರೆ ನೀಡಿದರು. ನಗರಸಭಾ ಸದಸ್ಯ ಎಸ್.ಸಿ. ಸತೀಶ್ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಶಾಂತಿ ಮೂಡಿಸಲು ಕಾಂಗ್ರೆಸ್‌ನವರು ಪ್ರಚೋದನೆ ನೀಡುತ್ತಿದ್ದಾರೆ ಎಂದು ಆಪಾದಿಸಿದರು. ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಮಾತನಾಡಿ, ರಾಷ್ಟçಕ್ಕೆ ಹಲವು ಕೊಡುಗೆಗಳನ್ನು ನೀಡಿರುವ ಆರ್‌ಎಸ್‌ಎಸ್ ವಿರುದ್ಧದ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಇಂತಹ ಹೇಳಿಕೆಗಳಿಂದ ಆರ್‌ಎಸ್‌ಎಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ನುಡಿದರು.

ಗೋಷ್ಠಿಯಲ್ಲಿ ಮುಡಾ ಮಾಜಿ ಅಧ್ಯಕ್ಷ ರಮೇಶ್ ಹೊಳ್ಳಾ, ಹಿಂದೂ ಕಾರ್ಯಕರ್ತ ಮಂದಣ್ಣ ಉಪಸ್ಥಿತರಿದ್ದರು.