ಸಿದ್ದಾಪುರ, ಅ. ೧೭ : ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರವು ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯ ಇದೆ ಎಂದು ಸಂತ ಅನ್ನಮ್ಮ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಅರ್ಪಿತಾ ಅಭಿಪ್ರಾಯಪಟ್ಟರು. ಸಂತ ಅನ್ನಮ್ಮ ಶಾಲೆ ಕೇಂದ್ರ ಮಾಧ್ಯಮಿಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಛದ್ಮವೇಷ ಸ್ಪರ್ಧೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಆಹಾರ, ಪರಿಸರ, ಕಲೆ, ಸಾಹಿತ್ಯ, ಕ್ರೀಡಾಕೂಟಗಳು ಸಹಕಾರಿಯಾಗಲಿದೆ ಎಂದರು. ಬಾಲವಾಡಿ, ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ವಿದ್ಯಾರ್ಥಿಗಳು ಹೂವು, ಹಣ್ಣು, ತರಕಾರಿಗಳ ಉಡುಗೆ ಧರಿಸಿ ಅವುಗಳ ಗುಣ ಲಕ್ಷಣಗಳು ಹಾಗೂ ಉಪಯೋಗಗಳ ಬಗ್ಗೆ ಮಾಹಿತಿ ನೀಡಿ ರಂಜಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ತೀರ್ಪುಗಾರರಾಗಿ ಭಾಗ್ಯಲಕ್ಷಿö್ಮ ಬಿ.ಜಿ, ಹಾಗೂ ವಿಕ್ಕಿ ಮಾಸ್ಟರ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಪೋಷಕರು ಮಾತನಾಡಿ ಶಿಕ್ಷಣದ ಜೊತೆಗೆ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂತ ಅನ್ನಮ್ಮ ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಮಾರ್ಜರಿ, ಸಂತ ಅನ್ನಮ್ಮ ಶಾಲೆಯ ಪಾಂಶುಪಾಲೆ ಸಿಸ್ಟರ್ ಲೆನಿಟ್, ಶಾಲಾ ಶಿಕ್ಷಕಿಯರಾದ ಲೇನಿ, ಸುನಿತಾ ,ತೆರೇಸ, ಸೇರಿದಂತೆ ಪೋಷಕರು ಹಾಜರಿದ್ದರು.