ಸುಂಟಿಕೊಪ್ಪ, ಅ. ೧೭: ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಆನೆಕಾಡು ಅರಣ್ಯ ಪ್ರದೇಶದ ಜಿಂಕೆಯೊAದರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಸಾಯಿಸಿದೆ.
ಆನೆಕಾಡು ಅರಣ್ಯ ಪ್ರದೇಶಕ್ಕೆ ಸೇರಿದ ಅಂದಾಜು ೨೦ ವರ್ಷ ಪ್ರಾಯದ ಜಿಂಕೆಯೊAದರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕೊಂದು ಹಾಕಿದ್ದು ಜಿಂಕೆಯ ಕಳೇಬರ ಅರಣ್ಯದಂಚಿನಲ್ಲಿನ ಆನೆ ಕಂದಕದಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಯವರಿಗೆ ತಿಳಿಸಿದ ಮೇರೆಗೆ ಸ್ಥಳಕ್ಕೆ ಆನೆಕಾಡು ಅರಣ್ಯ ಇಲಾಖೆಯ ಅಧಿಕಾರಿ ದೇವಯ್ಯ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.