ಕೂಡಿಗೆ, ಅ. ೧೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿರುವ ಮೀನು ಮರಿ ಉತ್ಪಾದನಾ ಹಾಗೂ ಪಾಲನ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇಂದ್ರದ ಮೀನು ಮರಿ ಉತ್ಪಾದನಾ ಪಾಲನ ಚಟುವಟಿಕೆಗಳನ್ನು ಗಮನಿಸಿ, ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಅಲ್ಲಿನ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು ಹಾಗೂ ಅಳಿವಿನಂಚಿನಲ್ಲಿರುವ ಸ್ಥಳೀಯ ಮೀನು ತಳಿಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸೂಚಿಸಿದರು.

ಮೀನು ಕೃಷಿಕ ರೈತರಿಗೆ ಬೇಡಿಕೆಯ ಅನುಗುಣವಾಗಿ ಗುಣಮಟ್ಟದ ಮೀನು ಮರಿಗಳನ್ನು ವಿತರಣೆ ಮಾಡಲು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಿ.ಎಸ್. ಸಚಿನ್, ಹಾರಂಗಿ ಮೀನುಮರಿ ಉತ್ಪಾದನಾ ಕೇಂದ್ರದ ಸಹಾಯಕ ನಿರ್ದೇಶಕ ಅಧಿಕಾರಿ ಎಸ್.ಎಂ. ಸಚಿನ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.