ಪಾಲಿಬೆಟ್ಟ, ಅ. ೧೮: ಕ್ಯಾಪ್ಟನ್ ಇಲೆವೆನ್ ವತಿಯಿಂದ ಪಾಲಿಬೆಟ್ಟದಲ್ಲಿ ಆಯೋಜಿಸಿದ್ದ ರಾಷ್ಟçಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರಿನ ನಜಮುಲ್ಲಾ ಯುನೈಟೆಡ್ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡರೆ, ಬೆಂಗಳೂರಿನ ಬ್ಲಾö್ಯಕ್ ಈಗಲ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಮೂರು ದಿನಗಳ ಕಾಲ ನಡೆದ ಪಂದ್ಯಾಟದಲ್ಲಿ ಜಿಲ್ಲೆ, ಹೊರ ಜಿಲ್ಲೆ ಸೇರಿದಂತೆ ಹೊರ ರಾಜ್ಯದ ಸುಮಾರು ೨೭ ತಂಡಗÀಳು ಭಾಗವಹಿಸಿದ್ದವು.
ಪಂದ್ಯಾವಳಿಯ ಉತ್ತಮ ಗೋಲ್ ಕೀಪರ್ ಆಗಿ ಮಂಗಳೂರು ತಂಡದ ಜಸೀಮ್, ಉತ್ತಮ ರಕ್ಷಣಾತ್ಮಕ ಆಟಗಾರನಾಗಿ ರಮೇಶನ್, ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಅಪ್ಪು, ಅತೀ ಹೆಚ್ಚು ಗೋಲ್ ಬಾರಿಸಿದ ಆಟಗಾರ ಆದಿಲ್, ಅಂತಿಮ ಪಂದ್ಯದ ಅತ್ಯುತ್ತಮ ಆಟಗಾರ ಸಿನಾನ್, ಉತ್ತಮ ಕಿರಿಯ ಆಟಗಾರ ಪವನ್, ಉದಯೋನ್ಮುಖ ಆಟಗಾರ ಆಸೀರ್, ಉತ್ತಮ ತಂಡ ಯಂಗ್ ಇಂಡಿಯಾ ಎ, ಅತ್ಯುತ್ತಮ ಹಿರಿಯ ಆಟಗಾರ ಪ್ರಶಸ್ತಿಯನ್ನು ದಿಲನ್ ಪಡೆದುಕೊಂಡರು.
ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಕೊಡಗಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ರೀಡಾಕೂಟಗಳು ನಡೆಯುತ್ತಿರುವುದು ಗಮನಾರ್ಹ ವಿಷಯವಾಗಿದೆ. ಸಂಘ-ಸAಸ್ಥೆಗಳು ಕ್ರೀಡಾಕೂಟ ಆಯೋಜನೆ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುತ್ತಿವೆ ಎಂದರು.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ ಮಾತನಾಡಿ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಕ್ಯಾಪ್ಟನ್ ಇಲೆವೆನ್ ತಂಡದ ಸ್ಥಾಪಕ ಅಧ್ಯಕ್ಷ ಪುಲಿಯಂಡ ಬೋಪಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಎಲ್. ರವಿಕುಮಾರ್ ವಹಿಸಿದ್ದರು. ಸಭೆಯಲ್ಲಿ ಗೌರವ ಅಧ್ಯಕ್ಷ ಟಿ.ಜಿ. ವಿಜೇಶ್, ಪಾಲಿಬೆಟ್ಟ ಉಪಠಾಣಾಧಿಕಾರಿ ಮಂಜುನಾಥ್, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ವರ್ತಕರ ಸಂಘದ ಅಧ್ಯಕ್ಷ ಮುನೀರ್, ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ದೂಜ ವೇಗಸ್, ಸ್ಥಳೀಯರಾದ ಗೀತಾ ನಾಯ್ಡು, ಕ್ಯಾಪ್ಟನ್ಸ್ ಇಲೆವೆನ್ ತಂಡದ ಪದಾಧಿಕಾರಿಗಳು, ಸದಸ್ಯರು ಹಾಗೂ ಮತ್ತಿತರರು ಭಾಗವಹಿಸಿದ್ದರು.