ನಾಪೋಕ್ಲು, ಅ. ೧೯: ಗುಜರಾತಿನ ಸೂರತ್‌ನಲ್ಲಿ ಜರುಗಿದ ನಾಲ್ಕನೇ ರಾಷ್ಟಿçÃಯ ವೆಟರನ್ಸ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಚಾಂಪಿಯನ್‌ಶಿಪ್ ೨೦೨೫ ಕ್ರೀಡಾಕೂಟದಲ್ಲಿ ಕೊಡಗಿನ ಮೂರು ಕ್ರೀಡಾಪಟುಗಳು ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಾಂಗಾಲ - ಬಿಟ್ಟಂಗಾಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ, ಭಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಜಾವಲಿನ್ ಎಸೆತದಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು, ಭಾರದ ಗುಂಡು ಎಸೆತದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಚೇಲಾವರ ಗ್ರಾಮದ ಪಟ್ಟಚೆರುವಂಡ ಗಗನ ಮೇದಪ್ಪ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು, ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ೧೧೦ ಹರ್ಡಲ್ಸ್ ರನ್ನಿಂಗ್‌ನಲ್ಲಿ ಪ್ರಥಮ ಸ್ಥಾನ, ೪೦೦x೪೦೦ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.