ಸೋಮವಾರಪೇಟೆ, ಅ. ೧೮: ಇಲ್ಲಿನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆ ವತಿಯಿಂದ ನ. ೬ ರಿಂದ ೧೦ರ ವರೆಗೆ ಪಟ್ಟಣದ ನಂಜಮ್ಮ ಕಲ್ಯಾಣ ಮಂಟಪದಲ್ಲಿ ಸುವರ್ಣ ಸಂಭ್ರಮ-ಜೇಸಿ ಸಪ್ತಾಹ ೨೦೨೫ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಜಗದಾಂಭ ಗುರುಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನವೆಂಬರ್ ೬ ರ ಸಂಜೆ ೬.೩೦ಕ್ಕೆ ಸುವರ್ಣ ಸಂಭ್ರಮ ಜೇಸೀ ಸಪ್ತಾಹಕ್ಕೆ ಚಾಲನೆ ನೀಡಲಾಗುವುದು. ೭.೩೦ಕ್ಕೆ ಯುಕೆಜಿ, ೧ ರಿಂದ ೫ ಹಾಗೂ ೬ ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ವಿಭಾಗಗಳಲ್ಲಿ ಛದ್ಮವೇಷ ಸ್ಪರ್ಧೆ ನಡೆಯಲಿದೆ. ನ. ೭ ರಂದು ಬೆಳಿಗ್ಗೆ ೧೦.೩೦ಕ್ಕೆ ೪ ರಿಂದ ೭ ಹಾಗೂ ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳು ಮತ್ತು ಕಾಲೇಜು ಹಾಗೂ ಸಾರ್ವಜನಿಕರಿಗೆ ಮೂರು ವಿಭಾಗಗಳಲ್ಲಿ ಚದುರಂಗ ಸ್ಪರ್ಧೆ ನಡೆಯಲಿದೆ. ಸಂಜೆ ೬.೩೦ಕ್ಕೆ ಮಹಿಳಾ ವಿಭಾಗದಿಂದ ‘ಅಮ್ಮನ ಮಡಿಲು’ ಎಂಬ ಅಮ್ಮ ಮತ್ತು ಮಕ್ಕಳ ಬಾಂಧವ್ಯದ ಆಟ ನಡೆಯಲಿದೆ. ನ. ೮ರಂದು ಬೆಳಿಗ್ಗೆ ೧೦.೩೦ಕ್ಕೆ ೪ ರಿಂದ ೭ ಹಾಗೂ ೮ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಬರವಣಿಗೆ ಸ್ಪರ್ಧೆ, ೧೧ಕ್ಕೆ ಸ್ಥಳದಲ್ಲಿ ಕ್ಲೇ ಕ್ರಾಪ್ಟ್ ಸ್ಪರ್ಧೆ ನಡೆಯಲಿದೆ. ಸಂಜೆ ೬ಕ್ಕೆ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಮತ್ತು ಸಾರ್ವಜನಿಕರ ವಿಭಾಗದಲ್ಲಿ ಗ್ರೂಪ್ ಡ್ಯಾನ್ಸ್ ಸ್ಪರ್ಧೆ ನಡೆಯಲಿದೆ. ಮೊದಲು ಬಂದ ೧೦ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು.
ನ. ೯ ರಂದು ಬೆಳಿಗ್ಗೆ ೭ ಗಂಟೆಗೆ ಬಾಲಕರು ಮತ್ತು ಬಾಲಕಿಯರ ಪ್ರತ್ಯೇಕ ವಿಭಾಗದಲ್ಲಿ ಮ್ಯಾರಥಾನ್ ಸ್ಪರ್ಧೆ ಜೇಸಿ ವೇದಿಕೆ ಎದುರು ನಡೆಯಲಿದೆ. ಸ್ಪರ್ಧೆಗೆ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಳ್ಳಿ ರವೀಂದ್ರ ಚಾಲನೆ ನೀಡಲಿದ್ದಾರೆ. ೧೦.೩೦ಕ್ಕೆ ಜೂನಿಯರ್ ಕಾಲೇಜು ಆವರಣದಲ್ಲಿ ೪ ರಿಂದ ೭ ಹಾಗೂ ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ನಿಧಾನವಾಗಿ ಸೈಕಲ್ ಚಲಿಸುವ ಸ್ಪರ್ಧೆ ನಡೆಯಲಿದೆ. ಪುರುಷರ ವಿಭಾಗದಲ್ಲಿ ನಿಧಾನವಾಗಿ ಮೋಟಾರ್ ಸೈಕಲ್ ಚಲಿಸುವ ಸ್ಪರ್ಧೆ ಹಾಗೂ ಸಾರ್ವಜನಿಕ ವಿಭಾಗದಲ್ಲಿ ೪ ಚಕ್ರ ವಾಹನ ಹಿಂದೆ ಚಲಿಸುವ ಸ್ಪರ್ಧೆ ಆಯೋಜಿಸಲಾಗಿದೆ. ಸಂಜೆ ೬.೩೦ಕ್ಕೆ ನಂಜಮ್ಮ ಕಲ್ಯಾಣ ಮಂಟಪದಲ್ಲಿ ಮನೋಹರ್ ಮತ್ತು ತಂಡದವರಿAದ ಪೂರ್ವಿಕ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದರು. ನ. ೧೦ ರಂದು ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೩ರವರೆಗೆ ಮಹಿಳಾ ಸಮಾಜದಲ್ಲಿ ಮೈಸೂರಿನ ಜೆಎಸ್‌ಎಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಸಂಜೆ ೬.೩೦ಕ್ಕೆ ನಂಜಮ್ಮ ಕಲ್ಯಾಣ ಮಂಟಪದಲ್ಲಿ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಜೇಸೀ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಿನುತ ಸುದೀಪ್, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ರಾಜೇಶ್, ಸಪ್ತಾಹದ ಯೋಜನಾ ನಿರ್ದೇಶಕ ಎಂ.ಪಿ. ರಾಜೇಶ್ ಹಾಗೂ ಕಾರ್ಯಕ್ರಮದ ನಿರ್ದೇಶಕಿ ಜಯಲಕ್ಷಿö್ಮÃ ಸುಬ್ರಮಣಿ ಇದ್ದರು.