ವೀರಾಜಪೇಟೆ, ಅ. ೧೯: ಮಾನವನ ಬದುಕಿನಲ್ಲಿ ಏರಿಳಿತಗಳು ಸಹಜ. ಸೋಲು - ಗೆಲುವುಗಳನ್ನು ಸಮಾನವಾಗಿ ಸ್ವೀಕಾರ ಮಾಡುವ ಗುಣಗಳನ್ನು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.

ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ಅಂತರ ಕೊಡವ ಸಮಾಜಗಳ ನಡುವೆ ವೀರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೆದರ್ ಬಾಲ್ ಕ್ರಿಕೆಟ್ ಪಂದ್ಯಗಳನ್ನು ಆಡುವುದರಿಂದ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡು ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದಾಗಿದೆ. ಇಂತಹ ಪಂದ್ಯಾವಳಿಗಳಿಗೆ ಜನರ ಸಹಕಾರ, ಪ್ರೋತ್ಸಾಹ ಅತ್ಯವಶ್ಯಕ ಎಂದರು.

ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ನಂಜಪ್ಪ ಮಾತನಾಡಿ, ಕೊಡವ ಕ್ರಿಕೆಟ್ ಅಕಾಡೆಮಿ ಯುವಜನತೆಯ ಉತ್ತಮ ಭವಿಷ್ಯಕ್ಕಾಗಿ ಆಯೋಜಿಸಿರುವ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟಗಳಿAದ ಉತ್ತಮ ಕ್ರೀಡಾಪಟುಗಳು ಹೊರಬರಲು ಸಾಧ್ಯವಾಗುತ್ತದೆ.

ಅತಿಥಿ ಆಟಗಾರರ ಸಂಖ್ಯೆಯನ್ನು ಹೆಚ್ಚಿಸಿದರೆ ಅವರ ಅನುಭವಗಳು ಇಲ್ಲಿನ ಆಟಗಾರರಿಗೆ ಲಭ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಕೊಡವ ಸಮಾಜದಲ್ಲಿ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಯುವ ಆಟಗಾರರಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

ಚಿತ್ರನಟಿ ಹಾಗೂ ಸಮಾಜಸೇವಕಿ ಕಾಣತಂಡ ಬೀನಾ ಜಗದೀಶ್ ಮಾತನಾಡಿ, ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗಳು ಕ್ರೀಡಾ ಸ್ಪರ್ಧಿಗಳ ಭವಿಷ್ಯಕ್ಕೆ ಸ್ಪೂರ್ತಿಯಾಗಲಿದೆ ಎಂದರು.

ಕೊಡವ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಚಿತ್ರನಟ ಕೂತಂಡ ತಾರಕ್ ಪೊನ್ನಪ್ಪ ಅತಿಥಿಗಳಾಗಿ ಮಾತನಾಡಿದರು.

ಮಾಳೇಟಿರ ಅಜೀತ್ ಪೂವಣ್ಣ ಪ್ರಾರ್ಥಿಸಿದರು. ಚೆಕ್ಕೆರ ಚಂದ್ರಪ್ರಕಾಶ್ ಸ್ವಾಗತಿಸಿದರು. ಚೋಕಿರ ಅನಿತಾ ಕಾರ್ಯಕ್ರಮ ನಿರೂಪಿಸಿದರು.