ಭಾಗಮAಡಲ, ಅ. ೧೯: ತಲಕಾವೇರಿ ಕ್ಷೇತ್ರಕ್ಕೆ ಭಾನುವಾರ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದರು.
ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ದೇವರ ದರ್ಶನ ಪಡೆದರು. ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಭಕ್ತರ ದಂಡು ಕ್ಷೇತ್ರಗಳಿಗೆ ಹರಿದು ಬಂತು. ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದು ಭಕ್ತರು ತಲಕಾವೇರಿಯತ್ತ ತೆರಳಿದರು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಸ್ಥಳೀಯ ಭಕ್ತರು ಆಗಮಿಸಿ ಪಡಿಯಕ್ಕಿಯನ್ನು ಮನೆಗಳಿಗೆ ತೆಗೆದುಕೊಂಡು ಹೋದರು. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಹೆಚ್ಚಿತ್ತು. -¸