ಮಡಿಕೇರಿ, ಅ. ೧೯: ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲೂಕು ಮಹಿಳಾ ಬಂಟರ ಸಂಘ, ಯೂತ್ ಬಂಟ್ಸ್ ಅಸೋಸಿಯೇಶನ್, ನಗರ ಬಂಟರ ಸಂಘ, ನಗರ ಮಹಿಳಾ ಬಂಟರ ಸಂಘ, ವೀರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ತಾಲೂಕು ಬಂಟರÀ ಸಂಘ, ವೀರಾಜಪೇಟೆ ತಾಲೂಕು ಮಹಿಳಾ ಬಂಟರ ಸಂಘಗಳ ಸಹಯೋಗದೊಂದಿಗೆ ಮಡಿಕೇರಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ-ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ತಾ. ೨೬ರಂದು ಬೆಳಿಗ್ಗೆ ೯.೩೦ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದರುಗಳಾದ ಸುರೇಶ್ ರೈ ಹಾಗೂ ಭವ್ಯಶ್ರೀ ರೈ ಉದ್ಘಾಟಿಸಲಿದ್ದಾರೆ. ಮಡಿಕೇರಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಸದಾಶಿವ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿತ್ತಾರ ವಾಹಿನಿಯ ಸವಿತಾ ರೈ, ಜಿಲ್ಲಾ ಬಂಟರ ಭವನ ಟ್ರಸ್ಟ್ನ ಕಾರ್ಯದರ್ಶಿ ಸತೀಶ್ ರೈ, ಖಜಾಂಚಿ ಬಾಲಕೃಷ್ಣ ರೈ, ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಗಿರೀಶ್ ರೈ, ಕಾರ್ಯದರ್ಶಿ ಚಂದ್ರಶೇಖರ್ ರೈ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ವೀರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ರೈ ಮುಖ್ಯ ಭಾಷಣ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಆದರ್ಶ ದಂಪತಿಗಳು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಸಮಾರೋಪ ಸಮಾರಂಭ

ಮಧ್ಯಾಹ್ನ ೨.೩೦ ಗಂಟೆಗೆ ಸದಾಶಿವ ರೈ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ, ಸುಬೇದಾರ್ ಮೇಜರ್ ಬಿ.ಐ. ಸದಾಶಿವ ರೈ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ, ಕೊಡಗು ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ಬಿ.ಕೆ. ರವೀಂದ್ರ ರೈ, ಗೌರವ ಅಧ್ಯಕ್ಷ ಬಿ.ಬಿ. ಐತಪ್ಪ ರೈ, ಕಾರ್ಯದರ್ಶಿ ರವೀಂದ್ರ ರೈ, ಖಜಾಂಚಿ ರತ್ನಾಕರ ರೈ, ಯೂತ್ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಸದಾನಂದ ರೈ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ವಿದ್ಯಾ ರೈ ಪಡುಮಲೆ ಆಗಮಿಸಲಿದ್ದು, ಇದೇ ಸಂದರ್ಭದಲ್ಲಿ ಸ್ವಜಾತಿ ಬಂಧುಗಳ ಸಾಧಕರಿಗೆ. ಚುನಾಯಿತ ಪ್ರತಿನಿಧಿಗಳಿಗೆ ಹೋಬಳಿ ಮಟ್ಟದ ಹಿರಿಯ ದಂಪತಿಯರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ.