ನಾಪೋಕ್ಲು, ಅ. ೧೮ : ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಅಗಸ್ತೆö್ಯÃಶ್ವರ ಹಾಗೂ ಕಣ್ವ ಮುನೀಶ್ವರ ದೇವಾಲಯದಲ್ಲಿ ತುಲಾ ಸಂಕ್ರಮಣ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು.
ಭಕ್ತಾದಿಗಳು ಕಾವೇರಿ ಸಂಕ್ರಮಣದ ಪುಣ್ಯ ತೀರ್ಥ ಸ್ನಾನ ಮಾಡಿ ಎರಡನೆಯ ಪುಣ್ಯತೀರ್ಥ ಸ್ನಾನವನ್ನು ಇಲ್ಲಿ ಮಾಡುವುದು ತಲತಲಾಂತರಗಳಿAದ ನಡೆದು ಬಂದ ಪದ್ಧತಿ. ಭಕ್ತರು ಜಾತ್ರೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಶ್ರದ್ಧೆಯಿಂದ ಪಾಲ್ಗೊಂಡು ವಿಶೇಷ ಪೂಜಾ ವಿಧಿ ವಿಧಾನಗಳನ್ನು ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗೆ ದೇವರಲ್ಲಿ ಪ್ರಾರ್ಥಿಸಿ ಧನ್ಯತಾ ಭಾವವನ್ನು ಹೊಂದಿದರು.
ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಕೇಶಮುಂಡನ, ಪಿಂಡಪ್ರದಾನ, ಕಾವೇರಿ ತೀರ್ಥಸ್ನಾನ, ಕಾವೇರಿಯ ಬಾಳೋಪಾಟ್ ಮತ್ತಿತರ ಕಾರ್ಯಗಳು ಜರುಗಿದವು. ಮಧ್ಯಾಹ್ನ ೧೧.೩೦ ಗಂಟೆಗೆ ಕಾವೇರಿ ನದಿಗೆ ಮಹಾಮಂಗಳಾರತಿಯನ್ನು ಅರ್ಚಕ ಮಹಾಬಲೇಶ್ವರ ಭಟ್ ನೇತೃತ್ವದ ತಂಡ ಧಾರ್ಮಿಕ ವಿಧಿ ವಿಧಾನ ನೆರವೇರಿಸಿತು. ಬಳಿಕ ನದಿಯಿಂದ ಪವಿತ್ರ ನೀರನ್ನು ಅರ್ಚಕರು ಬಿಂದಿಗೆಯಲ್ಲಿ ತುಂಬಿ ದೇವಾಲಯಕ್ಕೆ ಕೊಂಡೊಯ್ದು ಅಭಿಷೇಕ ಮಾಡಿದರು. ಆನಂತರ ವಿಶೇಷ ಮಹಾಪೂಜೆ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಆನಂತರ ಉತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆಯನ್ನು ಕೈಗೊಳ್ಳಲಾಯಿತು.
ಉತ್ಸವದಲ್ಲಿ ಪೊನ್ನಣ್ಣ ಭಾಗಿ
ಜಾತ್ರೆ ಮಹೋತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿ ತೀರ್ಥ ಪ್ರಸಾದ ಸ್ವೀಕರಿಸಿ ನಾಡಿನ ಹಾಗೂ ದೇಶದ ಸುಭಿಕ್ಷೆÀ್ಷಗಾಗಿ ಪ್ರಾರ್ಥಿಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಬಲಮುರಿ ತನ್ನದೇ ಆದ ವೈಶಿಷ್ಟö್ಯ ಹಾಗೂ ಪ್ರಾಮುಖ್ಯತೆಯನ್ನು ಹೊಂದಿದ ಸ್ಥಳವಾಗಿದೆ. ೪ಏಳನೇ ಪುಟಕ್ಕೆ (ಮೊದಲ ಪುಟದಿಂದ) ಇದರಲ್ಲಿ ಭಾಗವಹಿಸಿ ಸಾರ್ಥಕತೆಯ ಅನುಭವ ಹೊಂದಿದ್ದೇನೆ. ರಾಜ್ಯ, ರಾಷ್ಟçಕ್ಕೆ ತಾಯಿಯ ಆಶೀರ್ವಾದ ಲಭಿಸಲಿ ಎಂದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಹಾದೇವ ಸ್ಪೋರ್ಟ್ಸ್ ಕ್ಲಬ್ ಬಲಮುರಿ ಸಂಯುಕ್ತ ಆಶ್ರಯದಲ್ಲಿ ರವಿ ಓಂಕಾರ್ ಮ್ಯೂಸಿಕ್ ನಾಪೋಕ್ಲು ರವಿ, ಕಡ್ಲೆರ ತುಳಸಿ ಮೋಹನ್ ಹಾಗೂ ಸ್ಥಳೀಯ ಕಲಾವಿದರಿಂದ ಭಕ್ತಿಗೀತೆ ಕಾರ್ಯಕ್ರಮ ನಡೆಯಿತು.
ಮೂರ್ನಾಡು ಕೊಡವ ಸಮಾಜದ ಕಾರ್ಯದರ್ಶಿ ಸೂರಜ್ ತಮ್ಮಯ್ಯ, ನೆರವಂಡ ಕ್ಯಾಪ್ಟನ್ ಸುಭಾಷ್ ಮಾತನಾಡಿದರು. ಅನ್ನದಾನ ಸಮಿತಿ ಅಧ್ಯಕ್ಷ ಬೊಳ್ಳಚೆಟ್ಟಿರ ವಿಜಯ್ ಚೆಟ್ಟಿಚ್ಚ, ಉಪಾದ್ಯಕ್ಷ ಪಾಲಂದಿರ ಚಂಗಪ್ಪ, ಬಲಮುರಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ತೊತ್ತಿಯಂಡ ಬನ್ಸಿ ಚಿಣ್ಣಪ್ಪ, ಕಾರ್ಯದರ್ಶಿ ಬೊಳ್ಳಚೆಟ್ಟಿರ ಜಯಂತಿ, ಕಾಫಿ ಮಂಡಳಿ ಮಾಜಿ ಸದಸ್ಯೆ ತಾರಾ ಅಯ್ಯಮ್ಮ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬಿದ್ದಂಡ ಉಷಾ ದೇವಮ್ಮ, ಮಾಜಿ ಸದಸ್ಯ ಬೊಳ್ಳಚೆಟ್ಟಿರ ಸುರೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಪಾಲ್ಗೊಂಡಿದ್ದರು.
ಕಣ್ವ ಮುನೇಶ್ವರ ದೇವಾಲಯದಲ್ಲಿಯೂ ಉತ್ಸವ
ಕಾವೇರಿ ಎಡದಂಡೆಯ ಕಣ್ವ ಮುನೇಶ್ವರ ದೇವಾಲಯದಲ್ಲಿಯೂ ವಿಜೃಂಭಣೆಯಿAದ ಉತ್ಸವವನ್ನು ಆಚರಿಸಲಾಯಿತು. ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕ ವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೈಯ್ಯಂಡ ತಿಮ್ಮಯ್ಯ, ಮತ್ತಿತರರು ಪಾಲ್ಗೊಂಡಿದ್ದರು. ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಅಗಸ್ತೆö್ಯÃಶ್ವರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ, ದೇವತಕ್ಕರಾದ ಕೊಂಗೀರAಡ ಸಾಧು ತಮ್ಮಯ್ಯ ಮಾತನಾಡಿ, ಅಗಸ್ತö್ಯ ಮಹರ್ಷಿ ಪೂಜಿಸಿದ ಸ್ಥಳವಾದ ಈ ಕ್ಷೇತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದ್ದು, ಹಲವು ವರ್ಷಗಳಿಂದ ಅಭಿವೃದ್ಧಿ ಹೊಂದಿಲ್ಲ. ಭಕ್ತರಿಗೆ ಶೌಚಾಲಯ, ಅರ್ಚಕರಿಗೆ ವಸತಿ, ದೇವಾಲಯಕ್ಕೆ ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ. ಶಾಸಕರು ಅನುದಾನ ನೀಡುವಂತೆ ಕೋರಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸÀಕ ಎ. ಎಸ್. ಪೊನ್ನಣ್ಣ ಆಡಳಿತ ಮಂಡಳಿಯ ಮನವಿಗೆ ಸ್ಪಂದಿಸಿ ಮಾತನಾಡಿ ತ್ರಿವೇಣಿ ಸಂಗಮದಲ್ಲಿ ಅಭಿವೃದ್ಧಿಪಡಿಸಲಾಗಿರುವಂತೆ ಕಾವೇರಿ ನೀರಾವರಿ ನಿಗಮದ ವತಿಯಿಂದ ಕಾವೇರಿ ಸೇತುವೆ ಮತ್ತು ನದಿ ಭಾಗದ ಉನ್ನತೀಕರಣ ಮಾಡುವಂತಹ ಯೋಜನೆ ರೂಪಿಸಲಾಗುವುದು ಎಂದರು.