ನಾಪೋಕ್ಲು: ಸ್ವಚ್ಛ ಕೊಡಗು - ಸುಂದರ ಕೊಡಗು ಅಭಿಯಾನದಲ್ಲಿ ಸ್ಥಳೀಯ ಪ್ಲಾಂರ‍್ಸ್ ಕ್ಲಬ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಪಾಲ್ಗೊಂಡು ಸ್ವಚ್ಛತಾ ಕಾರ್ಯ ಕೈಗೊಂಡಿತು.
ಪ್ಲಾAರ‍್ಸ್ ಕ್ಲಬ್ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಚಿಯಕಪೂವಂಡ ಅಪ್ಪಚ್ಚು, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಅರೆಯಡ ರತ್ನ, ಕಲಿಯಂಡÀ ಕೌಶಿಕ್ ಹಾಗೂ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ತಂಡದ ಬಾಳೆಯಡ ದಿವ್ಯ ಮಂದಪ್ಪ. ತಂಡದ ಸದಸ್ಯರು ಪಾಲ್ಗೊಂಡಿದ್ದರು.ಮಡಿಕೇರಿ: ಬಂಟರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಘದ ಪದಾಧಿಕಾರಿ, ಸದಸ್ಯರು ನಗರದ ಮುಖ್ಯ ರಸ್ತೆ, ಸಿದ್ದಾಪುರ ರಸ್ತೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿ ಅಭಿಯಾನವನ್ನು ಬೆಂಬಲಿಸಿದರು.
ಮಡಿಕೇರಿ: ರೋಟರಿ ಮಡಿಕೇರಿ ವುಡ್ಸ್ ಪದಾಧಿಕಾರಿ, ಸದಸ್ಯರು ಸ್ವಚ್ಛ ಕೊಡಗು, ಸುಂದರ ಕೊಡಗು ಅಭಿಯಾನದಲ್ಲಿ ಪಾಲ್ಗೊಂಡು ನಗರದಲ್ಲಿ ಶ್ರಮದಾನ ಕೈಗೊಂಡರು. ಶ್ರೀಮಂಗಲ: ಸಮೀಪದ ಕುರ್ಚಿ ಗ್ರಾಮದಲ್ಲಿ ಶ್ರೀಮಂಗಲ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವಿವಿಧ ಹೋಂಸ್ಟೇ ಮಾಲೀಕರು ಹಾಗೂ ಸಿಬ್ಬಂದಿಗಳಿAದ ಸ್ವಚ್ಛತಾ ಕಾರ್ಯ ನಡೆಯಿತು.ಮಡಿಕೇರಿ: ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಿಬ್ಬಂದಿ ವರ್ಗದವರು ರಾಜಾಸೀಟ್ ರಸ್ತೆ ವ್ಯಾಪ್ತಿಯಲ್ಲಿ ಶುಚಿತ್ವ ಕಾರ್ಯ ನಡೆಸಿದರು.ಸುಂಟಿಕೊಪ್ಪ: ಸ್ವಚ್ಛ ಕೊಡಗು - ಸುಂದರ ಕೊಡಗು ಅಭಿಯಾನದ ಅಂಗವಾಗಿ ಗದ್ದೆಹಳ್ಳದ ಮಹಾತ್ಮಗಾಂಧಿ ವೃತ್ತದಿಂದ ಸುಂಟಿಕೊಪ್ಪದ ಅಯ್ಯಪ್ಪ ದೇವಸ್ಥಾನದವರೆಗೆ ಸ್ವಚ್ಛತೆ ಕಾರ್ಯ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ದಿನೇಶ್ ಅಭಿಯಾನಕ್ಕೆ ಚಾಲನೆ ನೀಡಿದರು.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ, ಹೊಟೇಲ್ ಮಾಲೀಕರ ಹಾಗೂ ಹೊಂಸ್ಟೇ ಮಾಲೀಕರ ಸಂಘದ ವತಿಯಿಂದ ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿ ಬಿದ್ದಿರುವ ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್, ತ್ಯಾಜ್ಯ, ಕಸಕಡ್ಡಿಗಳನ್ನು ಸೇರಿದಂತೆ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ ಟ್ರಾö್ಯಕ್ಟರ್ ವಾಹನಗಳಲ್ಲಿ ತುಂಬಿಸಿ ಕಸ ವಿಲೇವಾರಿ ಘಟಕಕ್ಕೆ ವಿಲೇವಾರಿಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎ. ಶಭೀರ್, ಹೆಚ್.ಯು. ರಫೀಕ್ ಖಾನ್, ಕೆ.ಎಂ. ಆಲಿಕುಟ್ಟಿ, ಎಂ.ಎಸ್. ಜಿನಾಷುದ್ದೀನ್, ಮಾಜಿ ಅಧ್ಯಕ್ಷ ಕೆ.ಇ. ಕರೀಂ, ಮಾಜಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಮಾಜಿ ಸದಸ್ಯ ಹನೀಫ್, ಪಂಚಾಯಿತಿ ಸಿಬ್ಬಂದಿಗಳಾದ ಚಂದ್ರಕಲಾ, ಶ್ರೀನಿವಾಸ್, ಸಂಧ್ಯಾ ಹಾಗೂ ಪೌರಕಾರ್ಮಿಕರು ಹಾಗೂ ಗ್ರಾಮದ ಮುಖಂಡರಾದ ಇಸಾಕ್‌ಖಾನ್ ಇನ್ನಿತರರು ಪಾಲ್ಗೊಂಡಿದ್ದರು. ಸುಂಟಿಕೊಪ್ಪ: ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಂದೋಲನಕ್ಕೆ ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಚಾಲನೆ ನೀಡಿದರು.
ಮಾದಾಪುರ ಗ್ರಾಮ ಪಂಚಾಯಿತಿ, ಮಾದಾಪುರ ಆಯುಧ ಪೂಜಾ ಸಮಿತಿ, ಎಸ್‌ಜೆಎಂ ವಿದ್ಯಾಸಂಸ್ಥೆ, ಮುಕೋಡ್ಲು ವ್ಯಾಲಿ ಡ್ಯೂ ಕಲ್ಚರಲ್ ಅಸೋಸಿಯೇಷನ್ ಇಸಂಯುಕ್ತ ಆಶ್ರಯದಲ್ಲಿ ಮಾದಾಪುರ ರಾಜ್ಯ ಹೆದ್ದಾರಿ ಬಳಿಯ ರಸ್ತೆ ಬದಿಯಲ್ಲಿ ಸ್ವಚ್ಛತೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಡುವಂಡ ಜಾಲಿ ಸೋಮಣ್ಣ, ಸದಸ್ಯರುಗಳಾದ ಕೆ.ಎ. ಲತೀಫ್, ಪಿ.ಡಿ. ಅಂತೋಣಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕೃಷ್ಣನ್ ನಾಯಕ್, ಸಿಬ್ಬಂದಿಗಳಾದ ರವೀಂದ್ರ, ಪ್ರೀತಿ, ಗಣೇಶ, ಲೆಕ್ಕಾಧಿಕಾರಿ ಅನಿತಾ, ಆಯುಧ ಪೂಜಾ ಆಚರಣಾ ಸಮಿತಿ ಅಧ್ಯಕ್ಷ ಕುಮಾರ, ಮಧು, ಶರಣು, ಮನು, ವ್ಯಾಲಿ ಡ್ಯೂ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಹಾಗೂ ಸದಸ್ಯರುಗಳು ಭಾಗವಹಿಸಿದ್ದರು. ಗೋಣಿಕೊಪ್ಪಲು: ಬಾಳೆಲೆ ಗ್ರಾಮದ ವಿಜಯಲಕ್ಷಿö್ಮ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯವರು ಸ್ವಚ್ಛತಾ ಕಾರ್ಯ ಕೈಗೊಂಡರು.
ಮಡಿಕೇರಿ: ನಗರದ ಸಂತ ಜೋಸೆಫರ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇಲ್ಲಿನ ಕಾನ್ವೆಂಟ್ ಜಂಕ್ಷನ್ ಸುತ್ತಮುತ್ತಲು ಸ್ವಚ್ಛತಾ ಕಾರ್ಯ ಕೈಗೊಂಡರು. ನಗರಸಭಾ ಅಧ್ಯಕ್ಷೆ ಕಲಾವತಿ ಮತ್ತು ಉಪಾಧ್ಯಕ್ಷ ಮಹೇಶ್ ಜೈನಿ ಕೂಡ ಪಾಲ್ಗೊಂಡಿದ್ದರು.ಪೊನ್ನAಪೇಟೆ: ಇಲ್ಲಿನ ಸಾಯಿ ಶಂಕರ ವಿದ್ಯಾಸಂಸ್ಥೆ, ಪ್ರಶಾಂತಿ ನಿಲಯ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು ವಿದ್ಯಾರ್ಥಿಗಳು ಮತ್ತೂರಿನಿಂದ ಪೊನ್ನಂಪೇಟೆಗೆ ಹೋಗುವ ರಸ್ತೆಯಲ್ಲಿರುವ ಪ್ಲಾಸ್ಟಿಕ್ ಹಾಗೂ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಿದರು.