ಸೋಮವಾರಪೇಟೆ, ಅ. ೨೦: ಬೆಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಕಾಲೇಜಿನ ಬಿಪಿಇಡಿಯಲ್ಲಿ ಶೇ. ೯೦ ಅಂಕದೊAದಿಗೆ ಎಂ.ಜಿ. ಧನ್ಯಾ ಚಿನ್ನದ ಪದಕ ಪಡೆದಿದ್ದಾರೆ.

ಬೆಂಗಳೂರಿನ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾನಿಲಯದ ೬೦ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯಪಾಲರು ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪದಕ ಸ್ವೀಕರಿಸಿದರು.

ವೇದಿಕೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವರು ಮತ್ತು ಬೆಂಗಳೂರು ವಿಶ್ವ ವಿದ್ಯಾನಿಲಯದ ಸಹ-ಕುಲಪತಿಗಳಾದ ಡಾ. ಎಂ.ಸಿ. ಸುಧಾಕರ್, ಉಪ ಕುಲಪತಿ ಡಾ. ಎಸ್.ಎಂ. ಜಯಕರ ಇದ್ದರು. ಎಂ.ಜಿ. ಧನ್ಯ, ಮೂದರವಳ್ಳಿ ಗ್ರಾಮದ ಸವಿತಾ ಮತ್ತು ಎಂ.ಪಿ. ಗಣೇಶ್ ಅವರ ಪುತ್ರಿ.